ಮಹಾರಾಷ್ಟ್ರ ಆ2 (Daijiworld News/RD): ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದು, ವೇದಿಕೆಯಲ್ಲೇ ಕುಸಿದು ಬಿದ್ದ ಘಟನೆ ನಡೆದಿದೆ.
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯಲ್ಲಿ ಒಂದು ದಿನದ ಪ್ರವಾಸ ಕೈಗೊಂಡಿರುವ ನಿತಿನ್ ಗಡ್ಕರಿ, ಪುಣ್ಯಶ್ಲೋಕ್ ಅಹಿಲ್ಯಾದೇವಿ ಹೋಳ್ಕರ್ ಸೋಲಾಪುರ ವಿವಿಯಲ್ಲಿ ನಡೆದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು, ಈ ವೇಳೆ ಕಾರ್ಯಕ್ರಮದ ಕೊನೆಯ ಹಂತವಾಗಿ ರಾಷ್ಟ್ರಗೀತೆಯನ್ನು ಹಾಡುತ್ತಿದ್ದ ಸಂದರ್ಭದಲ್ಲಿ ನಿತಿನ್ ಗಡ್ಕರಿ ನಿಂತಲ್ಲೆ ಕುಸಿದು ಬಿದ್ದಿದ್ದಾರೆ.
ಕೂಡಲೇ ಸ್ಥಳಕ್ಕೆ ಆಗಮಿಸಿದ ವೈದ್ಯರು ಗಡ್ಕರಿ ಅವರ ಆರೋಗ್ಯವನ್ನು ಪರೀಕ್ಷಿಸಿದ್ದು, ಅನಾರೋಗ್ಯದ ಹಿನ್ನೆಲೆಯಲ್ಲಿ ನಿತಿನ್ ಗಡ್ಕರಿ ಅವರು ಇನ್ನುಳಿದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ಹಿಂದೆ ನಾಗ್ಪುರದ ಮಹಾತ್ಮಾ ಪುಲೆ ಕೃಷಿ ವಿಶ್ವವಿದ್ಯಾನಿಲಯದ ಘಟಿಕೋತ್ಸವದಲ್ಲಿ ಭಾಗವಹಿಸಿದ ನಿತಿನ್ ಗಡ್ಕರಿ, ರಾಷ್ಟ್ರಗೀತೆ ಹಾಡುವ ಸಂದರ್ಭದಲ್ಲಿ ಕುಸಿದು ಬಿದ್ದಿದ್ದರು.