ಬೆಂಗಳೂರು, ಆ 02 (Daijiworld News/SM): ಅನರ್ಹಗೊಂಡ ಶಾಸಕ ಮುನಿರತ್ನ ಮಾಜಿ ಸಚಿವ ಡಿಕೆಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ ಎಂದು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರಗೊಂಡಿತ್ತು. ಆದರೆ, ಇದಕ್ಕೆ ಇದೀಗ ಸ್ವತಃ ಡಿಕೆಶಿ ಸ್ಪಷ್ಟನೆ ನೀಡಿದ್ದು, ಮುನಿರತ್ನ ತನ್ನನ್ನು ಭೇಟಿಯಾಗಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸತ್ಯಕ್ಕೆ ದೂರವಾದುದು. ಯಾವ ಮುನಿರತ್ನ ಕೂಡ ತಮ್ಮನ್ನು ಭೇಟಿ ಮಾಡಿಲ್ಲ. ಅದೆಲ್ಲಾ ಸುಳ್ಳು, ನಾವು ನಮ್ಮ ಪಕ್ಷದ ಕೆಲಸ ಮಾಡುತ್ತಿದ್ದೇವೆ. ಅವರು ಯಾವ ಪಕ್ಷಕ್ಕೆ ಹೋಗುತ್ತಾರೋ ಗೊತ್ತಿಲ್ಲ. ನಾನು ನನ್ನದೇ ಆದ ರಾಜಕಾರಣವನ್ನು ಮಾಡುತ್ತಿದ್ದೇನೆ ಎಂದಿದ್ದಾರೆ.