ಶ್ರೀನಗರ, ಮಾ. 15 (DaijiworldNews/AA): ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ನಲ್ಲಿ ಒಳನುಸುಳಲು ಯತ್ನಿಸುತ್ತಿದ್ದ ಪಾಕಿಸ್ತಾನದ ಉಗ್ರನನ್ನು ಭಾರತೀಯ ಸೇನೆ ಹತ್ಯೆ ಮಾಡಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಪೋಸ್ಟ್ ಮಾಡಿರುವ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್, ಮಾರ್ಚ್ 14 ಹಾಗೂ 15ರ ರಾತ್ರಿ ಭಯೋತ್ಪಾದಕ ಒಳನುಸುಳುವಿಕೆಗೆ ಯತ್ನಿಸುತ್ತಾನೆ ಎಂಬ ಜಮ್ಮು ಕಾಶ್ಮೀರ ಪೊಲೀಸರ ನಿಖರ ಮಾಹಿತಿ ಆಧರಿಸಿ, ಕಾರ್ಯಾಚರಣೆ ನಡೆಸಲಾಯಿತು ಎಂದು ಹೇಳಿದೆ.
ಜಂಟಿ ಕಾರ್ಯಾಚರಣೆ ವೇಳೆ ಪೊದೆಯಲ್ಲಿ ಅನುಮಾನಾಸ್ಪದ ಚಲನವಲನ ಗಮನಿಸಿದ ಸೈನಿಕರು, ಭಯೋತ್ಪಾದಕನ್ನು ಸೆರೆಹಿಡಿಯಲು ಯತ್ನಿಸಿದರು. ಅಷ್ಟರಲ್ಲಿ ಭಯೋತ್ಪಾದಕ ಗುಂಡು ಹಾರಿಸಲು ಯತ್ನಿಸಿದ್ದಾನೆ. ಕೆಲಕಾಲ ಗುಂಡಿನಚಕಮಕಿ ನಡೆದಿದೆ. ಈ ವೇಳೆ ಒಬ್ಬ ಪಾಕಿಸ್ತಾನಿ ಉಗ್ರನನ್ನು ಎನ್ಕೌಂಟರ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಎಕೆ ರೈಫಲ್ಸ್ ಪಿಸ್ತೂಲ್ಗಳು, ಹಾಗೂ ದೊಡ್ಡ ಪ್ರಮಾಣದ ಮದ್ದುಗುಂಡುಗಳನ್ನು ವಶಕ್ಕೆ ಪಡೆದಿದೆ. ಇನ್ನು ಈ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.