ನವದೆಹಲಿ, ಮಾ. 15 (DaijiworldNews/AA): ರಾಜ್ಯದ 2 ವಿಧಾನಸಭೆಯ ಉಪಚುನಾವಣೆಗಳಿಗೆ ದಿನಾಂಕ ಘೋಷಣೆ ಮಾಡಲಾಗಿದ್ದು, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಈ ಎರಡೂ ಕ್ಷೇತ್ರಗಳಿಗೆ ಏಪ್ರಿಲ್ 9 ರಂದು ಚುನಾವಣೆ ನಡೆಯಲಿದೆ. ಇನ್ನು ಚುನಾವಣೆಯ ಫಲಿತಾಂಶ ಮೇ 4 ರಂದು ಪ್ರಕಟಿಸಲಾಗುವುದು.

ಮಾಜಿ ಸಚಿವ ಎಚ್. ವೈ . ಮೇಟಿ ಅವರ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಹಾಗೂ ಮತ್ತೊರ್ವ ಹಿರಿಯ ಮಾಜಿ ಸಚಿವರಾದ ಶ್ಯಾಮನೂರು ಶಿವಶಂಕರಪ್ಪ ಅವರ ನಿಧನದಿಂದ ತೆರವಾಗಿರುವ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.
10 ರಾಜ್ಯಗಳ 37 ರಾಜ್ಯಸಭಾ ಸ್ಥಾನಗಳಿಗೆ ನಾಳೆ ಮತದಾನ ನಡೆಯಲಿದೆ. ಮಹಾರಾಷ್ಟ್ರದ 7, ತಮಿಳುನಾಡಿನ 6, ಬಿಹಾರ ಮತ್ತು ಪಶ್ಚಿಮ ಬಂಗಾಳದ ತಲಾ 5, ಒಡಿಶಾದ 4, ಅಸ್ಸಾಂನ 3, ತೆಲಂಗಾಣ, ಛತ್ತೀಸ್ ಗಡ ಮತ್ತು ಹರಿಯಾಣದ ತಲಾ 2 ಹಾಗೂ ಹಿಮಾಚಲ ಪ್ರದೇಶದಲ್ಲಿನ ಒಂದು ಸ್ಥಾನ ಸೇರಿದಂತೆ 37 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಈಗಾಗಲೇ ಮತದಾನಕ್ಕೆ ಅಗತ್ಯ ಸಿದ್ಧತೆಗಳು ಪೂರ್ಣಗೊಂಡಿದ್ದು, ಮುಕ್ತ ಹಾಗೂ ನ್ಯಾಯಯುತ ಚುನಾವಣೆಗೆ ಆಯೋಗ, ವೀಕ್ಷಕರನ್ನು ನೇಮಿಸಿದೆ.