ಮಡಿಕೇರಿ,ಆ 5 (Daijiworld News/RD): ಧಾರಕಾರ ಸುರಿಯುತ್ತಿರುವ ಮಳೆಯ ಪರಿಣಾಮವಾಗಿ ಇದೀಗ ಮಡಿಕೇರಿಯ ವಿರಾಜಪೇಟೆ-ಮಾಕುಟ್ಟ ರಸ್ತೆಯ ಒಂದು ಬದಿ ಭೂ ಕುಸಿತ ಉಂಟಾಗಿದೆ. ಹೀಗಾಗಿ ಮೂರು ದಿನಗಳ ಕಾಲ ಪೆರುಂಬಾಡಿ ಚೆಕ್ ಪೋಸ್ಟ್ನಿಂದ ಮಾಕುಟ್ಟ ಚೆಕ್ ಪೋಸ್ಟ್ವರೆಗಿನ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮುಂಜಾನೆಯಿಂದ ರಸ್ತೆಯ ಒಂದು ಬದಿ ಕುಸಿದ ಪರಿಣಾಮವಾಗಿ ರಸ್ತೆಯಲ್ಲಿ ಸಂಚರಿಸುವ ಜನರಲ್ಲಿ ಭೀತಿ ಉಂಟಾಗಿದೆ. ಈಗಾಗಲೇ ಸ್ಥಳಕ್ಕೆ ತಹಶೀಲ್ದಾರ್, ಲೋಕೋಪಯೋಗಿ ಇಂಜಿನಿಯರ್ ಮತ್ತು ಇತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹೀಗಾಗಿ ಸಾರ್ವಜನಿಕರ ಸುರಕ್ಷತೆಯ ದೃಷ್ಟಿಯಿಂದ ಮೂರು ದಿನಗಳವರೆಗೆ ಪೆರುಂಬಾಡಿ ಚೆಕ್ ಪೋಸ್ಟ್ ನಿಂದ ಮಾಕುಟ್ಟ ಚೆಕ್ ಪೋಸ್ಟ್ವರೆಗಿನ ರಸ್ತೆಯಲಿ ಸಂಚರಿಸುವ ವಾಹನಗಳನ್ನು ಸ್ಥಗಿತಗೊಳಿಸಿದೆ. ತಾತ್ಕಾಲಿಕವಾಗಿ ರಸ್ತೆಯನ್ನು ದುರಸ್ತಿಗೊಳಿಸಿದ ನಂತರ ರಸ್ತೆಯನ್ನು ಸಾರ್ವಜನಿಕ ಓಡಾಟಕ್ಕೆ ಮುಕ್ತಗೊಳಿಸಿ, ಶಾಶ್ವತವಾಗಿ ರಸ್ತೆಯನ್ನು ದುರಸ್ತಿಗೊಳಿಸಲು ಕ್ರಮ ವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಅನೀಸ್ ಕನ್ಮಣಿ ಜಾಯ್ ತಿಳಿಸಿದ್ದಾರೆ.