ಬೆಂಗಳೂರು, ಮಾ. 24 (DaijiworldNews/AK): ಕೊಲ್ಲಿ ರಾಷ್ಟ್ರಗಳ ಯುದ್ಧದ ನಡುವೆಯೂ ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ ಚಿನ್ನದ ಬೆಲೆ ಈಗ ಕುಸಿಯುತ್ತಿದ್ದು, 1 ಲಕ್ಷ ರೂ. ಸನಿಹಕ್ಕೆ ತಲುಪಿದೆ.

ಯುದ್ದದ ಪರಿಣಾಮ ಗಗನಕ್ಕೇರಿದ ಚಿನ್ನ ಈಗ ಪಾತಾಳಕ್ಕೆ ಕುಸಿದಿದೆ. ಚಿನ್ನದ ದರ ಕುಸಿತವು ಹೆಂಗಳೆಯರ ಮುಖದಲ್ಲಿ ಮಂದಹಾಸ ಮೂಡಿಸುತ್ತಿದೆ. 10 ಗ್ರಾಂ ಗೆ ಯುದ್ಧದ ಪರಿಣಾಮದಿಂದ 30 ಸಾವಿರ ರೂ. ವರೆಗೆ ಇದ್ದ 24 ಕ್ಯಾರೆಟ್ ಚಿನ್ನದ ದರ ಕೊಂಚ ಇಳಿಕೆ ಕಂಡಿದ್ದರೆ, 22 ಕ್ಯಾರೆಟ್ ಚಿನ್ನವೂ 25 ಸಾವಿರದಷ್ಟು ಇಳಿಕೆಯಾಗಿದೆ.
22 ಕ್ಯಾರೆಟ್ ಚಿನ್ನ 10 ಗ್ರಾಂಗೆ ಇಂದು 2,700 ರೂ ಇಳಿಕೆ, 1 ಗ್ರಾಂ ಗೆ 270 ರೂ. ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂಗೆ 2,940 ರೂ. ಅಂದರೆ 1 ಗ್ರಾಂಗೆ 294 ರೂ ಇಳಿಕೆಯಾಗಿದೆ. 22 ಕ್ಯಾರೆಟ್ ಚಿನ್ನದ ದರ 1,28,650 ರೂ ಆದರೆ 24ಕ್ಯಾರೆಟ್ ಚಿನ್ನದ ದರ 1,40,0350 ರೂ.ಗೆ ಬಂದಿದೆ.