ನವದೆಹಲಿ, ಮಾ. 25 (DaijiworldNews/TA): ಕಾಂಗ್ರೆಸ್ ನಾಯಕಿ ಮತ್ತು ರಾಜ್ಯಸಭಾ ಸಂಸದೆ ಸೋನಿಯಾ ಗಾಂಧಿ ಅವರನ್ನು ಮಂಗಳವಾರ ಸಂಜೆ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ಪ್ರಕಾರ ಅವರ ಆರೋಗ್ಯ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ.

ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಕೂಡ ಸಹ ಆಸ್ಪತ್ರೆಗೆ ಆಗಮಿಸಿದ್ದಾರೆ ಎನ್ನಲಾಗಿದೆ. ವಾಯು ಮಾಲಿನ್ಯ ಮತ್ತು ಹಠಾತ್ ಹವಾಮಾನ ಬದಲಾವಣೆಗಳು ಅವರ ಆರೋಗ್ಯ ತೊಂದರೆಗಳಿಗೆ ಕಾರಣವಾಗಿದೆ ಎಂದು ಹೇಳಲಾಗಿದೆ.
ಸೋನಿಯಾ ಗಾಂಧಿಗೆ ಉಸಿರಾಟದ ಸಮಸ್ಯೆಗಳು ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿವೆ. ಜನವರಿಯಲ್ಲಿ ಶ್ವಾಸನಾಳದ ಆಸ್ತಮಾ ಸ್ವಲ್ಪ ಉಲ್ಬಣಗೊಂಡಿದ್ದು ಪರೀಕ್ಷೆಗಳಲ್ಲಿ ಕಂಡುಬಂದಿತ್ತು.
72 ವರ್ಷದ ಸೋನಿಯಾ ಗಾಂಧಿ ಇದೀಗ ರಾಜ್ಯಸಭಾ ಸಂಸದೆಯಾಗಿದ್ದಾರೆ ಮತ್ತು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನ ಸಂಸದೀಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಆರೋಗ್ಯ ಕಾರಣಗಳಿಂದಾಗಿ ಅವರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಕಡಿಮೆ ತೊಡಗಿಕೊಂಡಿದ್ದಾರೆ.