ಪಾಟ್ನಾ, ಮಾ. 26 (DaijiworldNews/AA): ಯುಪಿಎಸ್ಸಿ ಪರೀಕ್ಷೆಯನ್ನು ಐಎಎಸ್, ಐಪಿಎಸ್ ಮತ್ತು ಐಎಫ್ಎಸ್ ನಂತಹ ಉನ್ನತ ಸರ್ಕಾರಿ ಸೇವೆಗಳಿಗೆ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ನಡೆಸಲಾಗುತ್ತದೆ. 2025 ನೇ ಸಾಲಿನ ಯುಪಿಎಸ್ಸಿ ಪರೀಕ್ಷೆಯಲ್ಲಿ 10ನೇ ರ್ಯಾಂಕ್ ಪಡೆದ ಉಜ್ವಲ್ ಪ್ರಿಯಾಂಕ್ ಅವರ ಯಶೋಗಾಥೆ ಇದು.

ಉಜ್ವಲ್ ಪ್ರಿಯಾಂಕ್ ಅವರು ಬಿಹಾರದ ಪಾಟ್ನಾದಲ್ಲಿ ಜನಿಸಿದರು. ಅವರ ತಂದೆ ಸಂಜೀವ್ ಕುಮಾರ್ ಸ್ವಯಂ ಉದ್ಯೋಗಿ ಮತ್ತು ತಾಯಿ ಅನಾಮಿಕಾ ಗೃಹಿಣಿ. ಪಾಟ್ನಾದ ಜ್ಞಾನ ನಿಕೇತನ್ ಮತ್ತು ಸೇಂಟ್ ಮೈಕೆಲ್ಸ್ ಹೈಸ್ಕೂಲ್ನಲ್ಲಿ ಶಿಕ್ಷಣ ಮುಗಿಸಿದ ಅವರು, ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್ನಲ್ಲಿ ಬಿ.ಟೆಕ್ ಪದವಿ ಪಡೆದರು.
ಇಂಜಿನಿಯರಿಂಗ್ ಪದವಿ ಪಡೆದ ಬಳಿಕ ಉಜ್ವಲ್ ಅವರು ಯುಪಿಎಸ್ಸಿ ಪರೀಕ್ಷೆಗೆ ತಯಾರಿ ನಡೆಸಲು ಪ್ರಾರಂಭಿಸಿದರು. ಅವರು ಸಮಾಜಶಾಸ್ತ್ರವನ್ನು ತಮ್ಮ ಐಚ್ಛಿಕ ವಿಷಯವನ್ನಾಗಿ ಆಯ್ಕೆಮಾಡಿಕೊಂಡರು.
ಉಜ್ವಲ್ ಅವರು ಮೊದಲ ಎರಡು ಪ್ರಯತ್ನದಲ್ಲಿ ಯುಪಿಎಸ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಅವರು ವಿಫಲರಾದರು. 2025ರಲ್ಲಿ ಮೂರನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದ ಅವರು 10 ನೇ ಅಖಿಲ ಭಾರತ ರ್ಯಾಂಕ್ ಪಡೆದು ಉತ್ತೀರ್ಣರಾಗುವಲ್ಲಿ ಯಶಸ್ವಿಯಾಗುತ್ತಾರೆ.