ಬೆಂಗಳೂರು, ಮಾ. 30 (DaijiworldNews/AA): ರಾಜ್ಯದ ಹಲವೆಡೆ ದಿನಗಳಿಂದ ಸಾಧಾರಣ ಮಳೆಯಾಗುತ್ತಿದೆ. ಇಂದೂ ಸಹ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, 17 ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಬೆಳಗಾವಿ, ಧಾರವಾಡ, ಉತ್ತರ ಕನ್ನಡ, ಶಿವಮೊಗ್ಗ, ಉಡುಪಿ, ಹಾವೇರಿ, ದಕ್ಷಿಣ ಕನ್ನಡ, ತುಮಕೂರು, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮಂಡ್ಯ, ಮೈಸೂರು, ಕೊಡಗು ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರದಲ್ಲೂ ಗಾಳಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.