ಪಾಟ್ನಾ, ಮಾ. 30 (DaijiworldNews/AA): ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಮ್ಮ ವಿಧಾನಪರಿಷತ್ತಿನ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ನಿತೀಶ್ ಕುಮಾರ್ ಮಾರ್ಚ್ 16 ರಂದು ರಾಜ್ಯಸಭೆಗೆ ಆಯ್ಕೆಯಾಗಿದ್ದರು. ಆಯ್ಕೆಯಾದ 14 ದಿನಗಳಲ್ಲಿ ರಾಜೀನಾಮೆ ನೀಡಬೇಕಾಗಿತ್ತು, ಆ ಗಡುವು ಇಂದು ಮುಕ್ತಾಯಗೊಳ್ಳುತ್ತಿತ್ತು. ಈ ಹಿನ್ನೆಲೆ ಇಂದು ಮುಖ್ಯಮಂತ್ರಿಯ ಅಧಿಕೃತ ನಿವಾಸದಲ್ಲಿ ಪರಿಷತ್ತಿನ ಅಧ್ಯಕ್ಷ ಅವಧೇಶ್ ನಾರಾಯಣ್ ಸಿಂಗ್ ಅವರಿಗೆ ರಾಜೀನಾಮೆ ಸಲ್ಲಿಸಿದರು.
ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ನಿತೀಶ್ ಕುಮಾರ್ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ರಾಜ್ಯಸಭೆಯಲ್ಲಿ ನಿತೀಶ್ ಕುಮಾರ್ ಅವರ ಅವಧಿ ಏಪ್ರಿಲ್ 10 ರಂದು ಪ್ರಾರಂಭವಾಗುತ್ತದೆ.