ನವದೆಹಲಿ,ಆ.06 (Daijiworld News/RD): ಸಂವಿಧಾನದಲ್ಲಿ ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ ನೀಡಿದ ಆರ್ಟಿಕಲ್ 370 ನ್ನು ರದ್ದುಪಡಿಸುವ ಮೂಲಕ ಐತಿಹಾಸಿಕ ನಿರ್ಣಯವನ್ನು ರಾಜ್ಯಸಭೆ ಅಂಗೀಕರಿಸಿದ ಬಳಿಕ ಇಂದು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಈ ವಿಚಾರಕ್ಕೆ ಸಂಬಂಧಪಟ್ಟಂತೆ ಲೋಕಸಭೆಯಲ್ಲಿ ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದಕ್ಕೆ ಕೆಂದ್ರ ಗೃಹ ಸಚಿವ ಅಮಿತ್ ಶಾ ಅವರು ಪಾಕ್ ಆಕ್ರಮಿತ ಕಾಶ್ಮೀರವು ಜಮ್ಮು ಮತ್ತು ಕಾಶ್ಮೀರಕ್ಕೆ ಸೇರಿದ್ದು, ಅದಕ್ಕಾಗಿ ಪ್ರಾಣ ಬೇಕಾದರು ಕೊಡಲು ನಾವು ಸಿದ್ಧರಿದ್ದೇವೆ ಎಂದು ಹೇಳುವ ಮೂಲಕ ಪ್ರತ್ಯುತ್ತರ ನೀಡಿದ್ದಾರೆ.
ಲೋಕಸಭೆಯಲ್ಲಿ ಈ ವಿಚಾರದ ಬಗ್ಗೆ ಮಿಶ್ರ ಪ್ರತಿಕ್ರಿಯೆ ಬಂದಿದ್ದು, ಪ್ರತಿಪಕ್ಷಗಳು ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತಿ ಪಡಿಸಿ ವಾದ ಮಾಡಿದರು. ಪಾಕಿಸ್ತಾನ ಕಾಶ್ಮೀರವನ್ನು ಆಕ್ರಮಿಸಿದಾಗ ಅಲ್ಲಿಗೆ ಸೇನಾಪಡೆಯನ್ನು ಕಳುಹಿಸಿ ಅಲ್ಲಿನ ಸ್ಥಿತಿಯನ್ನು ನಿಯಂತ್ರಿಸಿದ್ದು ಕಾಂಗ್ರೇಸಿಗರು, ಜೊತೆಗೆ ಕಾಶ್ಮೀರವನ್ನು ಭಾರತದ ಜತೆ ವಿಲೀನಗೊಳಿಸಿದವರು ಯಾರಾದರೂ ಇದ್ದರೆ ಅದು ಜವಾಹರಲಾಲ್ ನೆಹರೂ ಮಾತ್ರ ಎಂದು ಕಾಂಗ್ರೆಸ್ ನಾಯಕ ಮನೀಶ್ ತಿವಾರಿ ಹೇಳಿದರು.
ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಕ್ಷಿತ ಆಡಳಿತ ವ್ಯವಸ್ಥೆ ಕಲ್ಪಿಸುವ ಸಲುವಾಗಿ ದೇಶದ ಸಂಸತ್ತು ಕಾನೂನು ರೂಪಿಸುತ್ತದೆ, ಅದನ್ನು ತಡೆಯಲು ಯಾರಿಂದಲು ಸಾಧ್ಯವಿಲ್ಲ. ಮುಂದೊಂದು ದಿನ ಮತ್ತೆ ರಾಜ್ಯದ ಸ್ಥಾನಮಾನ ಪಡೆಯುವ ಸಾಧ್ಯತೆಯಿದೆ ಎಂಬ ಗೃಹ ಸಚಿವ ಅಮಿತ್ ಶಾ ಹೇಳಿದರು.