ನವದೆಹಲಿ, ಆ 02 (Daijiworld News/SM): ಕೇಂದ್ರದ ಮಾಜಿ ಸಚಿವೆ ಸುಶ್ಮಾ ಸ್ವರಾಜ್(66) ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
ಮಂಗಳವಾರ ಸಂಜೆ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಾಲ್ಕು ಮಂದಿ ವೈದ್ಯರು ಅವರಿಗೆ ನಿರಂತರ ಚಿಕಿತ್ಸೆ ನೀಡಿದ್ದರು. ಆದರೆ, ಚಿಕಿತ್ಸೆಗೆ ಸ್ಪಂಧಿಸದೆ ಅವರು ನಿಧನರಾಗಿದ್ದಾರೆ.
ದೇಶದಲ್ಲಿ ಹಿರಿಯ ಸಚಿವರಾಗಿ ಮೋದಿ ಸಂಪುಟದಲ್ಲಿ ಸಾಕಷ್ಟು ಸೇವೆ ಸಲ್ಲಿಸಿದ್ದರು. ವಿದೇಶಾಂಗ ಸಚಿರಾಗಿದ್ದಂತಹ ಸಂದರ್ಭದಲ್ಲಿ ಗಡಿಯ ಸಮಸ್ಯೆಗಳ ಪರಿಹಾರಕ್ಕೆ ಶ್ರಮಿಸಿದ್ದರು. ಅಲ್ಲದೆ, ವಿದೇಶದಲ್ಲಿ ಸಂಕಷ್ಟಕ್ಕೆ ಸಿಲುಕಿದವರಿಗೆ ಸುಶ್ಮಾ ಸ್ವರಾಜ್ ತಕ್ಷಣ ಸ್ಪಂಧಿಸುತ್ತಿದ್ದರು.
ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ನೀಡುವ ಆರ್ಟಿಕಲ್ 370ನ್ನು ರದ್ದುಗೊಳಿಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದ ಅವರು, ಈ ದಿನಕ್ಕಾಗಿ ನಾನು ಜೀವನದುದ್ದಕ್ಕೂ ಕಾಯುತ್ತಿದ್ದೆ. ಪ್ರಧಾನಿ ನರೇಂದ್ರ ಮೋದಿಗೆ ಧನ್ಯವಾದಗಳು ಎಂದು ಟ್ವೀಟ್ ಮಾಡಿದ ಕೆಲವೇ ಸಮಯದಲ್ಲಿ ಅವರಿಗೆ ಹೃದಯಾಘಾತವಾಗಿದೆ.
ಸುಶ್ಮಾ ಸ್ವರಾಜ್ ರಾಷ್ಟ್ರವಾದಿಯಾಗಿದ್ದರು. ದೆಹಲಿಯ ಮುಖ್ಯಮಂತ್ರಿಯಾಗಿಯೂ ಕೂಡ ಸೇವೆ ಸಲ್ಲಿಸಿದ್ದರು.
ಬಿಜೆಪಿಯ ಹಿರಿಯ ಮಹಿಳಾ ನಾಯಕಿಯಾಗಿದ್ದ ಸುಷ್ಮಾ ಸ್ವರಾಜ್ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಯಿಂದ ದೂರ ಉಳಿದಿದ್ದರು. ಅನಾರೋಗ್ಯದಿಂದಾಗಿ ಕಳೆದ ನವೆಂಬರ್ನಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎನ್ನುವ ವಿಚಾರವನ್ನು ಘೋಷಿಸಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
19532 ರ ಫೆಬ್ರವರಿ 14 ರಂದು ಜನಿಸಿದ್ದ ಅವರಿಗೆ 67 ವರ್ಷ ವಯಸ್ಸಾಗಿತ್ತು. ಕರ್ನಾಟಕದೊಂದಿಗೂ ನಿಕಟ ಸಂಪರ್ಕ ಹೊಂದಿದ್ದ ಸುಷ್ಮಾ ಬಳ್ಳಾರಿಯಿಂದ 1999 ರಲ್ಲಿ ಲೋಕಸಭೆಗೆ ಸ್ಪರ್ಧೆ ಮಾಡಿದ್ದರು. ಸುಷ್ಮಾ ಸ್ವರಾಜ್ ಮತ್ತು ಸೋನಿಯಾ ಗಾಂಧಿ ನಡುವಿನ ರಾಜಕೀಯ ಸಮರ ಇಡೀ ದೇಶದ ಗಮನ ಸೆಳೆದಿತ್ತು.