ನವದೆಹಲಿ, ಆ 07 (DaijiworldNews/SM): ಜಮ್ಮು ಕಾಶ್ಮೀರಕ್ಕೆ ಒದಗಿಸಿದ್ದ ವಿಶೇಷ ಸ್ಥಾನಮಾನ ತೆರವುಗೊಳಿಸಿದ ಬೆನ್ನಲ್ಲೇ ಇದೀಗ ಪಾಕಿಸ್ತಾನ ಭಾರತದ ಮೇಲೆ ದ್ವೇಷ ತೀರಿಸಿಕೊಳ್ಳಲು ಮುಂದಾಗಿದೆ. ಇಸ್ಲಾಮಾಬಾದ್ ನಲ್ಲಿರುವ ಭಾರತದ ರಾಯಭಾರಿಯನ್ನು ಹೊರ ಹಾಕುವ ಮೂಲಕ ಪಾಕಿಸ್ತಾನ ತನ್ನ ದ್ವೇಷ ಸಾಧಿಸಲು ಆರಂಭಿಸಿದೆ.
ಇದರ ನಡುವೆ ಐದು ಅಂಶಗಳ ಯೋಜನೆಯನ್ನು ಘೋಷಿಸಿದ್ದು, ಭಾರತದ ಜತೆಗೆ ಸಂಬಂಧವನ್ನು ಕಡಿತಗೊಳಿಸಲು ನಿರ್ಧರಿಸಿದೆ. ದ್ವಿಪಕ್ಷೀಯ ವ್ಯಾಪಾರ-ವ್ಯವಹಾರಗಳನ್ನು ಅಮಾನತು ಮಾಡಿದೆ. ಇನ್ನು ಈ ನಡುವೆ ವಿಶ್ವ ಸಂಸ್ಥೆಯನ್ನು ಕೂಡ ಮನವಿ ಮಾಡುವುದಾಗಿ ಪಾಕಿಸ್ತಾನ ಹೇಳಿಕೊಂಡಿದೆ.
ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ರನ್ನು ಮನವಿ ಮಾಡಲಿದ್ದಾರೆ. ಹಾಗೂ ಕಾಶ್ಮೀರ ವಿಚಾರಕ್ಕೆ ಮಧ್ಯಸ್ಥಿಕೆ ವಹಿಸಲು ಕೇಳಿದ್ದಾರೆ. ಆದರೆ ಇಂಥ ಪ್ರಸ್ತಾವಕ್ಕೆ ಭಾರತ ವಿರೋಧ ವ್ಯಕ್ತಪಡಿಸಿದೆ.