ಬೆಳಗಾವಿ,ಆ. 08 (Daijiworld News/RD): ಧಾರಕಾರವಾಗಿ ಸುರಿಯುತ್ತಿರುವ ಭಾರೀ ಮಳೆಗೆ ರಾಜ್ಯದ ಹಲವೆಡೆ ಪ್ರವಾಹ ಉಂಟಾಗಿದ್ದು ಜನಜೀವನ ಅಸ್ತವ್ಯಸ್ತಗೊಂಡಿದ್ದು, ಪರಿಸ್ಥಿತಿಯನ್ನು ಸುಧಾರಿಸುವ ಸಲುವಾಗಿ ಎಲ್ಲಾ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸಂತ್ರಸ್ತರಿಗೆ ಭರವಸೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹದಿಂದಾ ಹಾನಿಗೆ ಜೊತೆಗೆ ಮನೆ ಕಳೆದುಕೊಂಡವರಿಗೆ ಹೊಸ ಮನೆ ನಿರ್ಮಾಣ ಮಾಡಿಕೊಡಲಾಗುವುದು, ಆಸ್ತಿ ಹಾನಿಯದವರಿಗೂ ಪರಿಹಾರ ನೀಡಲಾಗುವುದು, ಜೊತೆಗೆ ಮೃತ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಘೋಷಿಸಿದರು.
ನೆರೆಪೀಡಿತ ಪ್ರದೇಶಗಳಲ್ಲಿ ಜನರನ್ನು ರಕ್ಷಿಸಲು, ಜೊತೆಗೆ ಸುರಕ್ಷಿತ ಕಯಾಚರಣೆ ನಡೆಸುವ ಸಲುವಾಗಿ ಈಗಾಗಲೇ ಜಗದೀಶ್ ಶೆಟ್ಟರ್, ಈಶ್ವರಪ್ಪ, ಶೋಭಾ ಕರಂದ್ಲಾಜೆ, ಕೋಟಾ ಶ್ರೀನಿವಾಸ ಪೂಜಾರಿ, ಪ್ರತಾಪ್ ಸಿಂಹ, ಬಿ.ವೈ. ರಾಘವೇಂದ್ರ, ಸಿ.ಎಂ. ಉದಾಸಿ ನೇತೃತ್ವದಲ್ಲಿ ತಂಡಗಳನ್ನು ರಚಿಸಲಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ತಕ್ಷಣ ಭೇಟಿ ನೀಡಿ ಪರಿಹಾರ ಕಾರ್ಯಾಚರಣೆ ನಡೆಸುಬಂತೆ ಈ ತಂಡಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಈಗಾಗಲೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗು ಪ್ರವಾಹದಿಂದ ಕಂಗೆಟ್ಟಿದ್ದು, ಪ್ರವಾಹ ಪೀಡಿತ ಪ್ರದೇಶಗಳ ರಕ್ಷಣಾ ಕಾರ್ಯಾಚರಣೆ ನಡೆಸಲು ಹೆಲಿಕಾಪ್ಟರ್ ಒದಗಿಸುವಂತೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬಳಿ ಸಿಎಂ ಮನವಿ ಮಾಡಿದ್ದಾರೆ. ಹಾಗಾಗಿ ವಿಶೇಷ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆ ತಂಡ ಇಂದು ಸಂಜೆ ಬೆಳಗಾವಿಗೆ ಬರುವ ಸಾಧ್ಯತೆ ಇದೆ.