ಬೆಳಗಾವಿ, ಆ 08 (DaijiworldNews/SM): ರಾಜ್ಯದಲ್ಲಿ ಎದುರಾಗಿರುವ ಪ್ರವಾಹ ಪರಿಸ್ಥಿತಿಯಿಂದ ಹಾನಿಗೆ ಪರಿಹಾರ ನೀಡಲು ಅಂದಾಜು 5000 ಕೋಟಿ ಅಗತ್ಯವಿದೆ. ಅಲ್ಲದೆ, ಭೀಕರವಾದ ಗಾಳಿ ಮಳೆಯಿಂದಾಗಿ ಸುಮಾರು 30 ಸಾವಿರ ಮನೆಗಳಿಗೆ ಹಾನಿಯಾಗಿದೆ. ಇವುಗಳನ್ನು ಲೆಕ್ಕಾಚಾರ ಮಾಡಿಕೊಂಡು ಹಾಗೂ ಸೂಕ್ತ ರೀತಿಯಲ್ಲಿ ಸಮೀಕ್ಷೆ ಮಾಡಿಕೊಂಡು ಶೀಘ್ರದಲ್ಲೇ ಪರಿಹಾರ ನೀಡಲಾಗುವುದೆಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ ತೀವ್ರವಾಗಿ ಮಳೆಯಿಂದ ಆಹುತಿಯಾಗಿರುವ ಪ್ರದೇಶಗಳಾದ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಲಮಟ್ಟಿ ಮತ್ತು ನಾರಾಯಣಪುರ ಜಲಾಶಯಗಳ ಹಿನ್ನೀರಿನಿಂದ ಮಹಾರಾಷ್ಟ್ರದ ಗಡಿ ಜಿಲ್ಲೆಗಳಾದ ಕೊಲ್ಲಾಪುರ ಮತ್ತು ಸಾಂಗ್ಲಿ ಜಿಲ್ಲೆಗಳಲ್ಲಿ ಪ್ರವಾಹಕ್ಕೆ ಕಾರಣವಾಗುತ್ತಿದೆ ಎಂದು ಕೆಲವು ಮಾಧ್ಯಮಗಳಲ್ಲಿ ಪ್ರಕಟವಾಗುತ್ತಿರುವ ತಪ್ಪು ಮಾಹಿತಿ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಆಲಮಟ್ಟಿ ಹಾಗೂ ನಾರಾಯಣಪುರ ಜಲಾಶಯಗಳಲ್ಲಿ ಗರಿಷ್ಠ ಮಟ್ಟದಲ್ಲಿ ನೀರು ಸಂಗ್ರಹಿಸಿದರೂ ಮಹಾರಾಷ್ಟ್ರದ ಜನರಿಗೆ ಯಾವುದೇ ರೀತಿಯ ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ.