ಬೆಂಗಳೂರು,ಆ.09 (Daijiworld News/RD): ಪ್ರವಾಹದಿಂದ ಭಾಗಶಃ ತತ್ತರಿಸಿ ಹೋದ ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳು ತೀರಾ ಸಂಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ಇದಕ್ಕಾಗಿ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ತಮ್ಮ ಒಂದು ತಿಂಗಳ ಸಂಬಳವನ್ನು ಪರಿಹಾರ ಕಾರ್ಯಕ್ಕಾಗಿ ನೀಡುತ್ತಿದ್ದೇವೆ, ಕಷ್ಟದ ಸಂದರ್ಭದಲ್ಲಿ ಅಣ್ಣ ತಮ್ಮಂದಿರೊಂದಿಗೆ ನಿಲ್ಲೋಣ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಉತ್ತರ ಕರ್ನಾಟಕವು ಪ್ರವಾಹದಿಂದಾಗಿ ಸಾಕಷ್ಟು ಪ್ರದೇಶಗಳು ಮುಳಗಡೆಗೊಳ್ಳುತ್ತಿದ್ದು, ನೆರೆಪೀಡಿತ ಪ್ರದೇಶಗಳಲ್ಲಿ ಸಂತೃಸ್ತರನ್ನು ಈಗಾಗಲೇ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸುತ್ತಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. ಜಿಲ್ಲೆಯ ಈ ಸ್ಥಿತಿಯ ಬಗ್ಗೆ ಟ್ವೀಟ್ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಅತಿವೃಷ್ಠಿಯಿಂದ ತತ್ತರಿಸಿರುವ ಉತ್ತರ ಕರ್ನಾಟಕ ಭಾಗದ ಪರಿಹಾರ ಕಾರ್ಯಕ್ಕಾಗಿ ಜೆಡಿಎಸ್ ಪಕ್ಷದ ಎಲ್ಲಾ ಶಾಸಕರು ನಮ್ಮ ಒಂದು ತಿಂಗಳ ಸಂಬಳವನ್ನು ನೀಡುತ್ತಿದ್ದೇವೆ. ಕಷ್ಟದ ಸಂದರ್ಭದಲ್ಲಿ ನಮ್ಮ ಅಣ್ಣ ತಮ್ಮಂದಿರೊಂದಿಗೆ ನಿಲ್ಲೋಣ ಎಂದು ತಮ್ಮ ಟ್ವೀಟರ್ನಲ್ಲಿ ಬರೆದುಕೊಂಡಿದ್ದಾರೆ.