ತಿರುವನಂತಪುರಂ, ಏ. 02 (DaijiworldNews/AK):ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬೇಡಿ. ಒಂದು ವೇಳೆ ದುಸ್ಸಾಹಸ ಮಾಡಿದರೆ ಊಹಿಸಲ ಸಾಧ್ಯವಾಗದಂತ ಪ್ರತಿಕ್ರಿಯೆ ಕೊಡುತ್ತೇವೆ ಎಂದು ಪಾಕಿಸ್ತಾನಕ್ಕೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ಎಚ್ಚರಿಕೆ ಕೊಟ್ಟಿದ್ದಾರೆ.

ತಿರುವನಂತಪುರಂನಲ್ಲಿ ಸೈನಿಕ ಸಮ್ಮಾನ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ನಮ್ಮ ನೆರೆಯ ರಾಷ್ಟ್ರವು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ದುಸ್ಸಾಹಸಕ್ಕೆ ಕೈ ಹಾಕಬಹುದು. ಒಂದು ವೇಳೆ ಹಾಗೆ ಮಾಡಿದರೆ, ಭಾರತದ ಪ್ರತಿಕ್ರಿಯೆಯೂ ಅಷ್ಟೇ ಕಠೋರವಾಗಿರುತ್ತದೆ. ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ ಎಂದು ತಿಳಿಸಿದ್ದಾರೆ.
ಉಸಿರುಗಟ್ಟಿದ ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ ನೌಕಾಪಡೆಯ ಹಡಗುಗಳು ದೇಶದ ಟ್ಯಾಂಕರ್ಗಳನ್ನು ಸುರಕ್ಷಿತವಾಗಿ ಕರೆದೊಯ್ಯುತ್ತಿವೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.
ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಈ ಸಂಘರ್ಷದ ಬಗ್ಗೆ ಕೆಲವರು ಸುಳ್ಳುಗಳನ್ನು ಹರಡುವ ಮೂಲಕ ಭೀತಿ ಮೂಡಿಸಲು ಬಯಸುತ್ತಾರೆ. ದೇಶದಲ್ಲಿ ಪೆಟ್ರೋಲ್-ಡೀಸೆಲ್ ಕೊರತೆಯೂ ಇಲ್ಲ. ಅನಿಲದ ಕೊರತೆಯೂ ಇಲ್ಲ. ಯಾವುದೇ ಇಂಧನ ಬಿಕ್ಕಟ್ಟನ್ನು ಎದುರಿಸಲು ಭಾರತ ಸಿದ್ಧವಾಗಿದೆ.