ಬೆಂಗಳೂರು, ಏ. 03 (DaijiworldNews/TA): ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಏಕಾಏಕಿ ಅಸ್ವಸ್ಥಗೊಂಡು ಕುಸಿದು ಬಿದ್ದ ಘಟನೆ ನಡೆದಿದೆ. ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಡೆದ ಸ್ಕೌಟ್ಸ್ & ಗೈಡ್ಸ್ ಆಯುಕ್ತ ಪಿಜಿಆರ್ ಸಿಂಧ್ಯಾ ಅವರಿಗೆ ಅಭಿನಂದನಾ ಸಮಾರಂಭದಲ್ಲಿ ಸಂತೋಷ್ ಹೆಗ್ಡೆ ಭಾಗವಹಿಸಿದ್ದರು. ಕಾರ್ಯಕ್ರಮದ ವೇಳೆ ಭಾಷಣ ಮಾಡುತ್ತಿದ್ದಾಗ ಅವರು ಅಸ್ವಸ್ಥಗೊಂಡಿದ್ದು, ಬಳಿಕ ಭಾಷಣ ಮುಗಿಸಿ ವೇದಿಕೆಯಲ್ಲಿ ಕುಳಿತುಕೊಳ್ಳುವಾಗ ಕುಸಿದು ಬಿದ್ದಿದ್ದಾರೆ.
ತಕ್ಷಣವೇ ಸ್ಥಳದಲ್ಲಿದ್ದವರು ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದು, ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಿಭಾಗದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.