ನವದೆಹಲಿ, ಏ. 03 (DaijiworldNews/AA): ದೆಹಲಿ-ಎನ್ಸಿಆರ್ ಸೇರಿದಂತೆ ಉತ್ತರ ಭಾರತದ ಹಲವು ಕಡೆಗಳಲ್ಲಿ ಇಂದು ಸಂಜೆ 5.9 ತೀವ್ರತೆಯ ಪ್ರಬಲ ಭೂಕಂಪನದ ಅನುಭವವಾಗಿದೆ.

ದೆಹಲಿ-ಎನ್ಸಿಆರ್, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಉತ್ತರ ಭಾರತದ ಹಲವಾರು ಪ್ರದೇಶಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿ ಭೂಮಿ ಕಂಪಿಸಿದ್ದರಿಂದ ಜನರು ತಮ್ಮ ಮನೆಗಳು ಮತ್ತು ಕಚೇರಿಗಳಿಂದ ಹೊರಗೆ ಓಡಿಬಂದಿರುವುದಾಗಿ ವರದಿಯಾಗಿದೆ.
ಇಂದು ಸಂಜೆ ದೆಹಲಿ-ಎನ್ಸಿಆರ್ನಲ್ಲಿ 5.9 ತೀವ್ರತೆಯ ಭೂಕಂಪ ಸಂಭವಿಸಿದ್ದು, ಉತ್ತರ ಭಾರತದಾದ್ಯಂತ ಕಂಪನದ ಅನುಭವವಾಗಿದೆ. ಭೂಕಂಪನದ ಕೇಂದ್ರಬಿಂದು ಅಫ್ಘಾನಿಸ್ತಾನದಲ್ಲಿ ಪತ್ತೆಯಾಗಿದೆ ಎಂದು ವರದಿಯಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕೆಲವು ಭಾಗಗಳಲ್ಲಿಯೂ ಭೂಕಂಪನದ ಅನುಭವವಾಗಿದೆ ಎನ್ನಲಾಗಿದೆ. ಈವರೆಗೂ ಭೂಕಂಪನದಿಂದಾಗಿ ಯಾವುದೇ ಜೀವ ಅಥವಾ ಆಸ್ತಿಪಾಸ್ತಿ ನಷ್ಟದ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.