ಕೋಲ್ಕತ್ತಾ, ಏ. 04 (DaijiworldNews/AA): ಯುಪಿಎಸ್ಸಿ ಪರೀಕ್ಷೆಯನ್ನು ಐಎಎಸ್, ಐಪಿಎಸ್ ಮತ್ತು ಐಎಫ್ಎಸ್ ನಂತಹ ಉನ್ನತ ಸರ್ಕಾರಿ ಸೇವೆಗಳಿಗೆ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ನಡೆಸಲಾಗುತ್ತದೆ. ಈ ಪರೀಕ್ಷೆಯನ್ನು ತಮ್ಮ ಎರಡನೇ ಪ್ರಯತ್ನದಲ್ಲಿ ಉತ್ತೀರ್ಣರಾದ ಮೇಘನಾ ಚಕ್ರವರ್ತಿ ಅವರ ಯಶೋಗಾಥೆ ಇದು.

ಕೋಲ್ಕತ್ತಾ ನಗರದ ನಿವಾಸಿಯಾಗಿರುವ ಮೇಘನಾ ಚಕ್ರವರ್ತಿ ಅವರು ದೆಹಲಿಯ ಸೇಂಟ್ ಸ್ಟೀಫನ್ಸ್ ಕಾಲೇಜಿನ ಹಳೆಯ ವಿದ್ಯಾರ್ಥಿನಿ. ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದಿಂದ ರಾಜ್ಯಶಾಸ್ತ್ರ ಮತ್ತು ಅಂತರಾಷ್ಟ್ರೀಯ ಸಂಬಂಧಗಳಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ.
ಮೇಘನಾ ಅವರು ಯುಪಿಎಸ್ಸಿ ಪರೀಕ್ಷೆಗೆ ರಾಜ್ಯಶಾಸ್ತ್ರ ಮತ್ತು ಅಂತರಾಷ್ಟ್ರೀಯ ಸಂಬಂಧ ವಿಷಯವನ್ನು ಐಚ್ಛಿಕ ವಿಷಯವನ್ನಾಗಿ ಆಯ್ಕೆ ಮಾಡಿಕೊಂಡಿದ್ದರು. ಆರಂಭದಲ್ಲಿ ದೆಹಲಿಯಲ್ಲಿ ತರಬೇತಿ ಪಡೆದ ನಂತರ, ಅವರು ಸ್ವಯಂ ಅಧ್ಯಯನದ ಕಡೆಗೆ ಗಮನ ಹರಿಸಿದರು.
ಮೊದಲ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದ ಮೇಘನಾ ಅವರು ಉತ್ತೀರ್ಣರಾಗುವಲ್ಲಿ ವಿಫಲರಾಗುತ್ತಾರೆ. ಬಳಿಕ ಎರಡನೇ ಬಾರಿಗೆ ಯುಪಿಎಸ್ಸಿ ಪರೀಕ್ಷೆ ಬರೆದ ಅವರು ಅಖಿಲ ಭಾರತ ಮಟ್ಟದಲ್ಲಿ 79ನೇ ರ್ಯಾಂಕ್ ಪಡೆಯುವ ಮೂಲಕ ಗಮನಾರ್ಹ ಸಾಧನೆ ಮಾಡಿದ್ದಾರೆ. ಮೇಘನಾ ಅವರು ಐಎಎಸ್ ಮತ್ತು ಐಎಫ್ಎಸ್ ಕೇಡರ್ಗಳನ್ನು ಆಯ್ಕೆಯಾಗುವ ಮೂಲಕ ಅನೇಕ ಅಭ್ಯರ್ಥಿಗಳಿಗೆ ಮಾದರಿಯಾಗಿದ್ದಾರೆ.