ಬೆಂಗಳೂರು, ಏ. 04 (DaijiworldNews/AK): 01 ಏಪ್ರಿಲ್ 2019ಕ್ಕಿಂತ ಹಿಂದೆ ರಿಜಿಸ್ಟ್ರೇಷನ್ ಆಗಿರುವ ಎಲ್ಲಾ ವಾಹನಗಳಿಗೂ ವಾಹನ ಮಾಲೀಕರು ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (ಹೆಚ್ಎಸ್ಆರ್ಪಿ HSRP) ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು, ಇದರಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟನೆ ನೀಡಿದೆ.

ಆ ಮೂಲಕ ಹರಡುತ್ತಿರುವ ಸುಳ್ಳು ಸುದ್ದಿಗೆ ತೆರೆ ಎಳೆಯಲಾಗಿದೆ. ಈ ಕುರಿತಾಗಿ ರಾಜ್ಯ ಸಾರಿಗೆ ಇಲಾಖೆಯಿಂದ ಮಾಧ್ಯಮ ಪ್ರಕಟಣೆ ಹೊರಡಿಸಲಾಗಿದೆ. ಹಳೆಯ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಲ್ಲ ಎಂದು ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಿಬಿಡಲಾಗಿತ್ತು. ಇದೀಗ ಅದೆಲ್ಲದಕ್ಕೂ ರಾಜ್ಯ ಸಾರಿಗೆ ಇಲಾಖೆ ತೆರೆ ಎಳೆದಿದೆ.
ಸಾರಿಗೆ ಇಲಾಖೆಯ ಪ್ರಕಾರ 01 ಏಪ್ರಿಲ್ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ತಿಳಿಸಿದೆ. ರಾಜ್ಯದ ಎಲ್ಲಾ ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ತಕ್ಷಣವೇ ಹೆಚ್ಎಸ್ಆರ್ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.