ತುಮಕೂರು, ಏ. 05 (DaijiworldNews/TA): ಶಿರಾ ತಾಲೂಕಿನ ಮಿನಿ ವಿಧಾನಸೌಧ ಬಳಿಯ ರಾಷ್ಟ್ರೀಯ ಹೆದ್ದಾರಿ 48ನಲ್ಲಿ ಭೀಕರ ಅಪಘಾತ ನಡೆದಿದೆ. ಖಾಸಗಿ ಸ್ಲೀಪರ್ ಬಸ್ಗೆ ಹಿಂದಿನಿಂದ ಕೆಎಸ್ಆರ್ಟಿಸಿ ಬಸ್ ಗುದ್ದಿದ ಪರಿಣಾಮ ಇಬ್ಬರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಮತ್ತು 35 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಮೃತರನ್ನು ಹಾವೇರಿ ಮೂಲದ ಪ್ರವೀಣ್ ಕೃಷ್ಣಪ್ಪ (28) ಮತ್ತು ಗದಗ ಮೂಲದ ಸಂಗೀತಾ (16) ಎಂದು ಗುರುತಿಸಲಾಗಿದೆ. ಅಪಘಾತ ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಸಂಭವಿಸಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಖಾಸಗಿ ಬಸ್ ಹೆದ್ದಾರಿಯ ಮೂರನೇ ಲೇನ್ನಿಂದ ಏಕಾಏಕಿ ಎರಡನೇ ಲೇನ್ಗೆ ಬಂದು ಕೆಎಸ್ಆರ್ಟಿಸಿ ಬಸ್ನೊಂದಿಗೆ ಡಿಕ್ಕಿ ಹೊಡೆಯಲಾಗಿದೆ. ಈ ವೇಳೆ, ಕೆಎಸ್ಆರ್ಟಿಸಿ ಬಸ್ ನಿಯಂತ್ರಣ ತಪ್ಪಿ ಖಾಸಗಿ ಬಸ್ನ ಹಿಂಭಾಗಕ್ಕೆ ಗುದ್ದಿದೆ. ಘಟನೆ ಸಂಬಂಧ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಎರಡು ಪತ್ಯೇಕ ಪ್ರಕರಣಗಳು ದಾಖಲಾಗಿದೆ.
ತುಮಕೂರು ನಗರ ಕುಣಿಗಲ್ ಸರ್ಕಲ್ನಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತವಾಗಿ ಬೈಕ್ ಸವಾರ ರಾಜಣ್ಣ (60, ಗೂಳರಿವೆ ಗ್ರಾಮ) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆ ಸ್ಥಳಕ್ಕೆ ತಲುಪಿದ ಸಂಚಾರ ಪೊಲೀಸರ ಪರಿಶೀಲನೆ ನಡೆಸಿದ್ದು, ಲಾರಿ ಚಾಲಕನನ್ನು ವಶಕ್ಕೆ ತೆಗೆದುಕೊಂಡು ಮೃತದೇಹವನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ತುಮಕೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.