ಬಾಗಲಕೋಟೆ, ಏ. 06 (DaijiworldNews/AK) :ಉಪ ಚುನಾವಣೆ ನಡೆಯುತ್ತಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ದೊಡ್ಡ ಅಂತರದ ಗೆಲುವು ಸಾಧಿಸುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸ ವ್ಯಕ್ತಪಡಿಸಿದರು.

ಮಾಧ್ಯಮಗಳ ಜೊತೆ ಇಂದು ಮಾತನಾಡಿದ ಅವರು, ಕಾಂಗ್ರೆಸ್ ಆಡಳಿತದ ಬಗ್ಗೆ ಎಲ್ಲ ವರ್ಗದ ಜನರೂ ಭ್ರಮನಿರಸನಗೊಂಡಿದ್ದಾರೆ. 2023ರಲ್ಲಿ ಕಾಂಗ್ರೆಸ್ಸಿಗೆ ಮತ ಹಾಕಿದ ಅಹಿಂದ ವರ್ಗದವರೂ ಕಾಂಗ್ರೆಸ್ ಬಗ್ಗೆ ಭ್ರಮನಿರಸನಗೊಂಡಿದ್ದಾರೆ ಎಂದು ತಿಳಿಸಿದರು.
ಎರಡೂ ಕಡೆ ಬಹಳ ದೊಡ್ಡ ಬದಲಾವಣೆಯ ಗಾಳಿ ಬೀಸುತ್ತಿದೆ. ಅದು ಮತವಾಗಿ ಪರಿವರ್ತನೆ ಆಗಿಯೇ ಆಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು. ಬಿಜೆಪಿ ಅಭ್ಯರ್ಥಿಗಳು ಎರಡೂ ಕಡೆ ದೊಡ್ಡ ಅಂತರದ ಗೆಲುವು ಸಾಧಿಸುತ್ತಾರೆ ಎಂದು ನುಡಿದರು.