ಬೆಂಗಳೂರು ,ಏ. 06 (DaijiworldNews/AK): ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಮುಗಿದಿದ್ದು, ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಉಪಚುನಾವಣೆಯ ಮತದಾನದ (ಎ.9) ನಂತರ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.

ಫೆ.28 ರಿಂದ ಮಾ.17ರವರೆಗೆ ನಡೆದಿದ್ದ ಪಿಯು ಪರೀಕ್ಷೆಗೆ ರಾಜ್ಯಾದ್ಯಂತ 7,10, 363 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಈ ಮೊದಲು ಎ.7 ರಂದು ಫಲಿತಾಂಶ ಪ್ರಕಟಿಸುವುದಾಗಿ ಶಾಲಾ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದರು.
ಹೀಗಾಗಿ ಫಲಿತಾಂಶ ಪ್ರಕಟಿಸಲು ಮಂಡಳಿಯು, ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಂಡಿತ್ತು. ಆದರೆ ಫಲಿತಾಂಶ ಈ ಮೊದಲು ನಿಗದಿಯಾಗಿದ್ದಂತೆ ಎ.7 ರಂದು ಪ್ರಕಟವಾಗುತ್ತಿಲ್ಲ ಎಂದು ಕರ್ನಾಟಕ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ಮೂಲಗಳು ತಿಳಿಸಿವೆ.
ಬಾಗಲಕೋಟೆ ಮತ್ತು ದಾವಣಗೆರೆ ವಿಧಾನಸಭಾ ಉಪ ಚುನಾವಣೆಯ ನೀತಿ ಸಂಹಿತೆ ಜಾರಿ ಇರುವ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಉಪಸ್ಥಿತಿಯಲ್ಲಿ ಫಲಿತಾಂಶ ಪ್ರಕಟಿಸಲು ಚುನಾ ಚುನಾವಣಾ ಆಯೋಗ ಈವರೆಗೆ ಒಪ್ಪಿಗೆ ನೀಡದಿರುವುದರಿಂದ ಫಲಿತಾಂಶ ಪ್ರಕಟ ವಿಳಂಬವಾಗುತ್ತಿದೆ ಎಂದು ತಿಳಿದು ಬಂದಿದೆ.