ದಾವಣಗೆರೆ/ಬಾಗಲಕೋಟೆ, ಏ. 09 (DaijiworldNews/AA): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತದಾನ ಬೆಳಗ್ಗೆ 7 ಗಂಟೆಯಿಂದ ಶುರುವಾಗಿದೆ.

ಸಂಜೆ 6 ಗಂಟೆಯವರೆಗೂ ಮತದಾನ ನಡೆಯಲಿದ್ದು ಎರಡೂ ಕ್ಷೇತ್ರಗಳಿಂದ ಒಟ್ಟು 34 ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.
ಸುಗಮ ಮತದಾನಕ್ಕಾಗಿ ಎರಡೂ ಕ್ಷೇತ್ರಗಳಲ್ಲಿ ಸುಮಾರು 2,500 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಈ ಉಪಚುನಾವಣೆಯ ಫಲಿತಾಂಶವು ಮೇ ೪ರಂದುಪ್ರಕಟವಾಗಲಿದೆ.
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ. ಸ್ಪರ್ಧಿಸುತ್ತಿದ್ದಾರೆ.