ಬೆಂಗಳೂರು, ಏ. 09 (DaijiworldNews/AK):ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್ಲೈನ್ನಲ್ಲಿ ಪ್ರಕಟಿಸಲಾಗಿದೆ.





ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ.
ಈ ವರ್ಷ, ಶೇಕಡಾ 86 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಒಟ್ಟು 7,10,363 ವಿದ್ಯಾರ್ಥಿಗಳಲ್ಲಿ ಸುಮಾರು 6.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ.
ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ಈ ಬಾರೀ ಉತ್ತೀರ್ಣ ಶೇಕಡಾವಾರು 73.45 ರಷ್ಟಿದ್ದು, ಈ ವರ್ಷ ಏರಿಕೆ ಕಂಡು ಬಂದಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 600 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ.
ವಿಜಯನಗರ ಜಿಲ್ಲೆಯ ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಕಲಾ ವಿಭಾಗದ ಇಬ್ಬರು ವಿದ್ಯಾರ್ಥಿನಿಯರು 598 ಅಂಕಗಳನ್ನು ಪಡೆಯುವ ಮೂಲಕ ದ್ವಿತೀಯ ಸ್ಥಾನ ಹಂಚಿಕೊಂಡಿದ್ದಾರೆ.
ಎಕ್ಸ್ಪರ್ಟ್ ಕಾಲೇಜಿನ ಟಾಪರ್ಗಳಲ್ಲಿ ನಂದನ್ ನಾಯಕ್ ಮತ್ತು ಸಾಮಾನ್ಯು ಎಸ್ ಶೆಟ್ಟಿ ತಲಾ 99.67% ಗಳಿಸಿದರೆ, ನಂತರ ದೀಕ್ಷಾ ಶೆಣೈ, ಅದಿತಿ ಐ ರೆಡ್ಡಿ, ಅಮೋಘ್ ಬಿ ಲೋಕ ಮತ್ತು ಸುಶನ್ ನಾರಾಯಣ ಬಿಲ್ಲವ ತಲಾ 99.33% ಗಳಿಸಿದ್ದಾರೆ.
ಕಾರ್ಕಳದ ಜ್ಞಾನಸುಧಾ ಪಿಯು ಕಾಲೇಜಿನ ಚೈತ್ರಿಕಾ ಚೌಧರಿ ವಿಜ್ಞಾನ ವಿಭಾಗದಲ್ಲಿ 597 ಅಂಕಗಳನ್ನು ಗಳಿಸಿದರೆ, ಅದೇ ಸಂಸ್ಥೆಯ ವೈಷ್ಣವಿ ಕುಲಕರ್ಣಿ ಮತ್ತು ಅನಾರ್ವಿ ಕೂಡ 597 ಅಂಕಗಳನ್ನು ಗಳಿಸುವ ಮೂಲಕ ಅಗ್ರ ಸಾಧಕರಲ್ಲಿ ಒಬ್ಬರಾಗಿದ್ದಾರೆ.
ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಪ್ರೇರಣಾ ರಾಮಚಂದ್ರ ಹೆಗ್ಡೆ ವಾಣಿಜ್ಯ ವಿಭಾಗದಲ್ಲಿ 598 ಅಂಕಗಳನ್ನು ಗಳಿಸುವ ಮೂಲಕ ಶೇ. 99.67 ರಷ್ಟು ಅಂಕಗಳನ್ನು ಗಳಿಸುವ ಮೂಲಕ ಅತ್ಯುತ್ತಮ ಸಾಧನೆ ಮಾಡಿದ್ದಾರೆ.