ನವದೆಹಲಿ, ಏ. 09 (DaijiworldNews/AA): ಜೆಡಿಯು ಅಧ್ಯಕ್ಷ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶುಕ್ರವಾರ ರಾಜ್ಯಸಭಾ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಏ.14 ರಂದು ಬಿಹಾರದ ನೂತನ ಸಿಎಂ ಆಯ್ಕೆಯಾಗುವ ಸಾಧ್ಯತೆಯಿದೆ.

ಪ್ರಮಾಣ ವಚನ ಸ್ವೀಕರಿಸಿದ ನಂತರ ನಿತೀಶ್ ಕುಮಾರ್ ನಾಳೆಯೇ ಪಾಟ್ನಾಗೆ ಹಿಂತಿರುಗಲಿದ್ದಾರೆ ಮತ್ತು ಅವರ ಉತ್ತರಾಧಿಕಾರಿಯ ಆಯ್ಕೆ ಕುರಿತು ಚರ್ಚಿಸಲು ಏಪ್ರಿಲ್ 13 ರಿಂದ ಬಿಹಾರ ಸಚಿವ ಸಂಪುಟ ಸಭೆಯನ್ನ ನಿಗದಿಪಡಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಏಪ್ರಿಲ್ 14ರಂದು ನಿತೀಶ್ ಕುಮಾರ್ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆಯಿದೆ. ಏಪ್ರಿಲ್ 15 ರಂದು ಬಿಹಾರದ ನೂತನ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಕಳೆದ ತಿಂಗಳು ಜೆಡಿಯು ಸೇರಿದ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಅವರನ್ನ ಹೊಸ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿ ನೇಮಿಸುವ ಸಾಧ್ಯತೆ ಇದೆ.