ಕಾರವಾರ, ಏ. 09 (DaijiworldNews/AK): ಮಧ್ಯಪ್ರಾಚ್ಯ ಯುದ್ಧ ಸಂಘರ್ಷ ಹಾಗೂ ಹವಾಮಾನ ಬದಲಾವಣೆ ಮೀನುಗಾರರ ಆರ್ಥಿಕ ಚಟುವಟಿಕೆ ಮೇಲೆ ಪರಿಣಾಮ ಬೀರಿದ್ದು, ನಷ್ಟ ಹಿನ್ನೆಲೆಯಲ್ಲಿ ಕಾರವಾರದ ಬಂದರಿನಲ್ಲಿ ಮೀನುಗಾರಿಕೆ ಬಂದ್ ಆಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬೈತಕೋಲ್ ಬಂದರಿನಲ್ಲಿ ಬೋಟ್ಗಳು ಲಂಗರು ಹಾಕಿವೆ. ಪರಿಣಾಮ ಮೀನುಗಾರಿಕಾ ವಾಹನಗಳು ಖಾಲಿ ನಿಂತಿವೆ. ಬಂದರಿನಲ್ಲಿ ಮೀನುಗಾರಿಕಾ ಚಟುವಟಿಕೆ ಸಂಪೂರ್ಣ ಸ್ತಬ್ಧವಾಗಿದ್ದು, ಮೀನುಗಾರರು ಸಮುದ್ರಕ್ಕಿಳಿಯುತ್ತಿಲ್ಲ. ಮಧ್ಯಪ್ರಾಚ್ಯ ಯುದ್ಧ ಸಂಘರ್ಷದಿಂದಾಗಿ ಹೊರ ದೇಶಕ್ಕೆ ಮೀನುಗಳ ರಫ್ತು ವಹಿವಾಟಿನಲ್ಲಿ ಇಳಿಕೆ ಕಂಡು ದರ ಕುಸಿತವಾಗಿದೆ.
ಮತ್ತೊಂದೆಡೆ ಹವಾಮಾನ ಬದಲಾವಣೆಯಿಂದ ಸಮುದ್ರ ಉಗ್ರವಾಗಿದ್ದು, ಆಳಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟುಗಳು ಮರಳಿ ಬಂದರಿನಲ್ಲಿ ಲಂಗರು ಹಾಕಿವೆ.