ಹೊಸದಿಲ್ಲಿ,ಆ.10 (Daijiworld News/RD): ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿಯ ಹಿರಿಯ ಮುಖಂಡ ಅರುಣ್ ಜೇಟ್ಲಿ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಅವರನ್ನು ದೆಹಲಿಯ ಏಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದ್ದು ಇದೀಗ ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ.
66 ವರ್ಷದ ಅರುಣ್ ಜೇಟ್ಲಿ, ಅವರಿಗೆ ಎದೆ ನೋವು ಮತ್ತು ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಗ ಆಸ್ಪತ್ರಗೆ ದಾಖಲಿಸಲಾಗಿದ್ದು, ಇದೀಗ ಅವರಿಗೆ ಕೃತಕ ಉಸಿರಾಟದ ವ್ಯವಸ್ಥೆಯ ಮೂಲಕ ಉಸಿರಾಡುತ್ತಿದ್ದಾರೆ. ಇದೀಗ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು, ಆಸ್ಪತ್ರೆಗೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಹಾಗೂ ಪಕ್ಷದ ಹಲವಾರು ಕಾರ್ಯಕರ್ತರು ಭೇಟಿ ನೀಡಿ ಜೇಟ್ಲಿಯ ಆರೋಗ್ಯದ ಬಗ್ಗೆ ವೈಧ್ಯಾಧಿಕಾರಿಗಳ ಜೊತೆ ವಿಚಾರಿಸಿದರು.
ಬಿಜೆಪಿಯ ಹಿರಿಯ ಮುಖಂಡರಾಗಿರುವ ಅರುಣ್ ಜೇಟ್ಲಿ ಮೋದಿ ಸಂಪುಟದಲ್ಲಿ ಹಣಕಾಸು ಸಚಿವರಾಗಿ ಸೇವೆ ಸಲ್ಲಿಸಿದ್ದರು. ಜೇಟ್ಲಿಯವರಿಗೆ ಚಿಕಿತ್ಸೆ ಮುಂದುವರೆಸಲಾಗಿದ್ದು, ಅವರ ಆರೋಗ್ಯದಲ್ಲಿ ಕೊಂಚ ಸುಧಾರಿಕೆ ಕಂಡಿದೆ.
ತಮ್ಮ ಎಡಗಾಲಿನ ಕ್ಯಾನ್ಸರ್ ನಿಂದ ಬಳಲುತ್ತಿರುವ ಜೇಟ್ಲಿ ಅವರು ಜನವರಿಯಲ್ಲಿ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬಳಿಕ ಫೆಬ್ರವರಿ 9ರಂದು ಭಾರತಕ್ಕೆ ಮರಳಿದ್ದರು. ಈ ಸಂದರ್ಭ ಕೇಂದ್ರ ಬಜೆಟ್ ಅನ್ನು ಪಿಯೂಷ್ ಗೋಯಲ್ ಬಜೆಟ್ ಮಂಡಿಸಿದ್ದರು. ನರೇಂದ್ರ ಮೋದಿ ಅವರ ಎರಡನೇ ಅವಧಿಯ ಸರಕಾರದಲ್ಲಿ ತಮ್ಮ ಅನಾರೋಗ್ಯದ ಹಿನ್ನೆಲೆಯಲ್ಲಿ ಜೇಟ್ಲಿ ಮಂತ್ರಿ ಪದವಿ ನಿರಾಕರಿಸಿದ್ದರು.