ಬಳ್ಳಾರಿ,ಆ.11(Daijiworld News/RD): ರಾಜ್ಯದ ಹಲವು ಜಿಲ್ಲೆಗಳಲ್ಲಿ ಭೀಕರ ಪ್ರವಾಹದಿಂದ ಕಂಗೆಟ್ಟಿದ್ದು, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಈಗಾಗಲೇ ಪ್ರವಾಹಪೀಡಿತ ಸ್ಥಳಕ್ಕೆ ಭೇಟಿ ನೀಡಿ ಸಂತೃಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದರೆ, ಇತ್ತ ಬಿಜೆಪಿ ಶಾಸಕ ಶ್ರೀ ರಾಮುಲು ಅವರು ಕಬಡ್ಡಿ ಆಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲಾತಾಣದಲ್ಲಿ ಹರಿದಾಡುತ್ತಿದೆ.
ಬಳ್ಳಾರಿಯ ಗಾಂಧಿ ಭವನದಲ್ಲಿ ಶನಿವಾರ ಸಂಜೆ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾವಳಿಯನ್ನು ಹಮ್ಮಿಕೊಂಡಿದ್ದು, ಈ ಕಬಡ್ಡಿ ಪಂದ್ಯಾವಳಿಯಲ್ಲಿ ಶಾಸಕ ಶ್ರೀರಾಮುಲು ತುಂಬಾ ಜೋಶ್ ಅಲ್ಲಿ ತನ್ನ ಮೊಣಕಾಲನ್ನೂರಿ ಕಬಡ್ಡಿ ಆಡುವುದರಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದಾರೆ. ಶಾಸಕ ಕಬಡ್ಡಿ ಆಢಿದ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದ್ದು ಜನತೆಯ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ರಾಜ್ಯಾದ ಹಲವು ಜಿಲ್ಲೆಗಳ ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತವಾಗಿ, ಒಂದು ಹೊತ್ತಿನ ಊಟಕ್ಕೂ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಪ್ರವಾಹದಿಂದಾಗಿ ಮನೆ ಮಠ, ಪ್ರಾಣವನ್ನೇ ಕಳೆದುಕೊಂಡು ಕಂಬನಿ ಮಿಡಿಯುತ್ತಿದ್ದು, ಹೀಗಿರುವಾಗ ಶಾಸಕರಿಗೆ ರಾಜ್ಯದ ಈ ಸಂಕಷ್ಟದ ಸ್ಥಿತಿಯ ಬಗ್ಗೆಯ ಪರಿಜ್ಞಾನವಿಲ್ಲದಂತೆ ವರ್ತಿಸುತ್ತಿದ್ದಾರೆ. ಶಾಸಕರು ಪರಿಹಾರ ಕೋಡುವುದು ಬೇಡ ಆದರೂ ಅವರ ಒಂದು ಸಾಂತ್ವನದ ನುಡಿಗಳನ್ನು ನಾವು ಬಳಸುತ್ತೇವೆ ಎಂದು ತೀವ್ರ ಟೀಕೆ ವ್ಯಕ್ತಪಡಿಸಿದರು.
ಇದೀಗ ಶಾಸಕ ಶ್ರೀರಾಮುಲು ಆಡಿದ ಈ ವಿಡಿಯೋ ಸಾಮಾಜಿಕ ಜಲಾತಾಣದಲ್ಲಿ ವೈರಲ್ ಆಗುತ್ತಿದ್ದು, ಇದಕ್ಕೆ ಎಲ್ಲಾ ಕಡೆಯಿಂದ ವಿರೋಧವನ್ನು ಜೊತೆಗೆ ಆಕ್ರೋಶವನ್ನು ಜನತೆ ವ್ಯಕ್ತಪಡಿಸಿದ್ದು, ಈ ಬಗ್ಗೆ ಮಾತನಾಡಿದ ಶ್ರೀರಾಮುಲು ಅವರು ನಾಳೆಯಿಂದ ನೆರೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಲಿದ್ದೇನೆ. ನನಗೆ ಕಬಡ್ಡಿ ಆಡಬೇಕು ಎಂಬ ಉದ್ದೇಶ ಇರಲಿಲ್ಲ, ಅಲ್ಲಿನ ಮಕ್ಕಳು ಹಠ ಮಾಡಿದ್ದರಿಂದ ಕಬಡ್ಡಿ ಆಡಿದೆ ಅಷ್ಟೆ ಎಂದು ಸ್ಪಷ್ಟಪಡಿಸಿದರು.