ಬೆಳಗಾವಿ,ಆ.11(Daijiworld News/RD): ಮಹಾಮಳೆಯಿಂದ ತತ್ತರಿಸಿರುವ ಬೆಳಗಾವಿಯ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆಗಮಿಸಿದ್ದಾರೆ.
ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದರು, ಜೊತೆಗೆ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಸುರೇಶ ಅಂಗಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಪ್ರವಾಹಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆಯ ಬಳಿಕ ರಾಜ್ಯದ ಹಿರಿಯ ಅಧಿಕಾರಿಗಳ ಜತೆಗೆ ಅಮಿತ್ ಶಾ ವಿಮಾನ ನಿಲ್ದಾಣದ ಸಭಾ ಭವನದಲ್ಲಿ ಸಭೆ ನಡೆಸಲಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವ ಬಿಎಸ್ ಯಡಿಯೂರಪ್ಪ ಇನ್ನೂ ಸಚಿವ ಸಂಪುಟ ರಚನೆ ಆಗಲಿಲ್ಲ. ಹೀಗಾಗಿ ಹಲವು ಬಾರಿ ಈ ಬಗ್ಗೆ ಚರ್ಚೆ ನಡೆಸಲು ಲವು ಬಾರಿ ದೆಹಲಿಗೆ ಪ್ರಯಾಣ ಬೆಳೆಸಿದರು, ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಿಲ್ಲ. ಹೀಗಾಗಿ ಈಗಾಗಲೇ ನೆರೆಪೀಡಿತ ಪ್ರದೇಶಗಳಿಗೆ ವೈಮಾನಿಕ ಸಮೀಕ್ಷೆ ಹಮ್ಮಿಕೊಂಡಿರುವ ಅಮಿತ್ ಶಾ ಬಳಿಕ ನಡೆಸುವ ಸಭೆಯಲ್ಲಿ ಸಚಿವ ಸಂಪುಟ ವಿಚಾರದ ಬಗ್ಗೆ ಚರ್ಚೆ ನಡೆಯಲಿದೆಯೇ ಎಂಬುವುದು ಕಾದು ನೋಡಬೇಕಿದೆ.