ಬೆಳಗಾವಿ, ಆ 11 (DaijiworldNews/SM): ರಾಜ್ಯದಲ್ಲಿ ಭೀಕರ ಜಲ ಪ್ರಳಯದಿಂದಾಗಿ ಸುಮಾರು ಹತ್ತು ಸಾವಿರ ಕೋಟಿ ರೂಪಾಯಿಗೂ ಅಧಿಕ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ 3 ಸಾವಿರ ಕೋಟಿ ರೂಪಾಯಿ ನೆರವು ಒದಗಿಸಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ರಾಜ್ಯಕ್ಕೆ ಆಗಮಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಜತೆ ಪ್ರವಾಹ ಬಾಧಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಹಿರಿಯ ಅಧಿಕಾರಿಗಳ ಸಭೆಯ ನಡೆಸಿದರು. ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ರಾಜ್ಯದಲ್ಲಿ ಹತ್ತು ಸಾವಿರ ಕೋಟಿ ಹಾನಿ ಎಂಬುವುದು ಪ್ರಾಥಮಿಕವಾಗಿ ಅಂದಾಜು ಮಾತ್ರ. ಪ್ರವಾಹ ಸ್ಥಿತಿಯನ್ನು ನೋಡಿದರೆ ಅಂದಾಜು 30 ರಿಂದ 40 ಸಾವಿರ ಕೋಟಿ ರೂಪಾಯಿ ಹಾನಿಯಾಗಿದೆ ಎಂದರು.