ಬೆಂಗಳೂರು, ಆ.13(Daijiworld News/SS): ನೆರೆ ಸಂತ್ರಸ್ತರ ಪರಿಹಾರ ಕಾರ್ಯದಲ್ಲಿ ಪಕ್ಷ ಸೇರಿದಂತೆ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದೆಂದೂ ಕಂಡರಿಯದ ರೀತಿಯಲ್ಲಿ ಭೀಕರ ಪ್ರವಾಹ ತಲೆದೋರಿದ್ದು, ಸಂತ್ರಸ್ತರಿಗೆ ಸಹಾಯ ಹಸ್ತ ಚಾಚುವಂತೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.
ನೆರೆ ನಿರ್ವಹಣೆ ನಿಟ್ಟಿನಲ್ಲಿ ಸರ್ಕಾರ ಕೈಗೊಂಡಿರುವ ಪರಿಹಾರ ಕಾರ್ಯಕ್ಕೆ ನಾವು ತೊಂದರೆ ಮಾಡುವುದಿಲ್ಲ. ನೆರೆ ಸಂತ್ರಸ್ತರ ಪರಿಹಾರ ಕಾರ್ಯದಲ್ಲಿ ಪಕ್ಷ ಸೇರಿದಂತೆ ಯಾರೂ ಕೂಡ ರಾಜಕೀಯ ಮಾಡಬಾರದು ಎಂದು ಸಲಹೆ ನೀಡಿದ್ದಾರೆ.
ಇದೇ ವೇಳೆ ರಾಜ್ಯ ರಾಜಕಿಯದ ಬಗ್ಗೆ ಮಾತನಾಡಿದ ಅವರು, ರಾಜ್ಯದ ಇತಿಹಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳಿಲ್ಲದೆ ಸ್ವಾತಂತ್ರ್ಯ ದಿನಾಚರಣೆ ವೇಳೆ ಜಿಲ್ಲೆಗಳಲ್ಲಿ ಅಧಿಕಾರಿಗಳು ಧ್ವಜಾರೋಹಣ ಮಾಡುತ್ತಿದ್ದಾರೆ. ಇದು ಬಿಜೆಪಿ ಸರ್ಕಾರ ಅಧಿಕಾರಿಗಳಿಗೆ ನೀಡಿದ ಕೊಡುಗೆ ಎಂದು ಅವರು ಲೇವಡಿ ಮಾಡಿದರು.