ನವದೆಹಲಿ, ಆ 13 (DaijiworldNews/SM): ಸುಪ್ರೀಂಕೋರ್ಟ್ ಮೆಟ್ಟಿಲೇರಿದ ಅನರ್ಹ ಶಾಸಕರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ. ಅನರ್ಹ ಶಾಸಕರು ಸಲ್ಲಿಸಿದ್ದ ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ.
ಆ ಮೂಲಕ ಈ ಹಿಂದೆ ಸ್ಪೀಕರ್ ಆಗಿದ್ದ ವೇಳೆ ರಮೇಶ್ ಕುಮಾರ್ ನೀಡಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೇಟ್ಟಿಲೇರಿದ್ದ 17 ಅನರ್ಹ ಶಾಸಕರಿಗೆ ಮತ್ತೊಂದು ಬಾರಿ ಹಿನ್ನೆಡೆಯಾಗಿದೆ.
ಇನ್ನು ಅಯೋಧ್ಯೆ ರಾಮ ಜನ್ಮ ಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿದಿನ ವಿಚಾರಣೆ ನಡೆಯುತ್ತಿದೆ. ಈ ಹಿನ್ನೆಲೆಯಲ್ಲಿ ಅನರ್ಹ ಶಾಸಕರ ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವುದು ಅಸಾಧ್ಯ ಎಂದು ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರು ಅರ್ಜಿದಾರರ ಪರ ವಕೀಲ ಮುಕುಲ್ ರೋಹಟಗಿ ಅವರಿಗೆ ಸೂಚಿಸಿದ್ದಾರೆ.
ಆದರೆ ಶೀಘ್ರದಲ್ಲಿ ವಿಚಾರಣಾ ದಿನಾಂಕವನ್ನು ನಿಗದಿಗೊಳಿಸಲಾಗುವುದು ಎಂದಿರುವ ಕೋರ್ಟ್, ಸಾಧ್ಯವಾದರೆ ಮತ್ತೊಂದು ಪೀಠದಲ್ಲಿ ವಿಚಾರಣೆಗೆ ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದೆ.