ಮಂಗಳೂರು, ಆ.14(Daijiworld News/SS): ಆಗಸ್ಟ್ 15ರ ಸ್ವಾತಂತ್ರ್ಯೋತ್ಸವ ಹಿನ್ನೆಲೆಯಲ್ಲಿ, ಜಮ್ಮು - ಕಾಶ್ಮೀರದಲ್ಲಿ ಭಾರೀ ಬಂದೋಬಸ್ತ್ ಏರ್ಪಡಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನ ಹಿಂಪಡೆದ ನಂತರ, ಕಣಿವೆ ರಾಜ್ಯದಲ್ಲಿ ಸ್ವಾತಂತ್ರ್ಯೋತ್ಸವ ಆಚರಿಸಲು ಭರ್ಜರಿ ಸಿದ್ಧತೆ ನಡೆಯುತ್ತಿದೆ. ಜಮ್ಮು-ಕಾಶ್ಮೀರದಲ್ಲಿ ಪರಿಸ್ಥಿತಿ ಶಾಂತವಾಗಿದ್ದು, ಲಾಲ್ ಚೌಕ್ ಅನ್ನು ರಾಜಕೀಯದ ಸ್ಥಳವನ್ನಾಗಿ ಮಾಡಬೇಡಿ ಎಂದು ಜಮ್ಮು-ಕಾಶ್ಮೀರ ರಾಜ್ಯಪಾಲ ಸತ್ಯಪಾಲ ಮಲಿಕ್ ಹೇಳಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಆಗಸ್ಟ್ 4ರಿಂದ ಭಾರೀ ಭದ್ರತೆಯಿಂದಾಗಿ ಗುಂಪುಗೂಡುವುದು, ಸಂಚಾರ ಸೇರಿದಂತೆ ವಿವಿಧ ಚಟುವಟಿಕೆಯನ್ನು ನಿರ್ಬಂಧಿಸಲಾಗಿದೆ. ಆಗಸ್ಟ್ 15ರ ಸ್ವಾತಂತ್ರ್ಯ ದಿನದ ನಂತರ ಜಮ್ಮು ಕಾಶ್ಮೀರದಲ್ಲಿನ ನಿರ್ಬಂಧಗಳನ್ನು ತೆರವುಗೊಳಿಸುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.
ಜಮ್ಮು-ಕಾಶ್ಮೀರದಲ್ಲಿ ಯಾವುದೇ ಜೀವ ಹಾನಿ ಸಂಭವಿಸಬಾರದು ಎಂಬ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ. ಜನರ ರಕ್ಷಣೆ ಮತ್ತು ಭದ್ರತೆ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. 50 ಸಾವಿರಕ್ಕೂ ಹೆಚ್ಚು ಭದ್ರತಾ ಪಡೆಯನ್ನು ನಿಯೋಜಿಸಲಾಗಿದೆ.