ನವದೆಹಲಿ, ಆ 16 (Daijiworld News/MSP): ಕಳೆದ ಹಲವು ದಿನಗಳಿಂದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ (ಏಮ್ಸ್) ಆಸ್ಪತ್ರೆಯಲ್ಲಿ ದಾಖಲಾಗಿರುವ 66 ವರ್ಷದ ಮಾಜಿ ಹಣಕಾಸು ಸಚಿವ ಮತ್ತು ಹಿರಿಯ ಬಿಜೆಪಿ ಮುಖಂಡ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಈ ಹಿನ್ನಲೆಯಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಏಮ್ಸ್ ಗೆ ಭೇಟಿ ನೀಡಿ ಅರುಣ್ ಜೇಟ್ಲಿ ಆರೋಗ್ಯ ಸ್ಥಿತಿಯ ಬಗ್ಗೆ ವಿಚಾರಿಸಿದರು.ಅರುಣ್ ಜೇಟ್ಲಿ ಅವರ ಆರೋಗ್ಯದಲ್ಲಿ ವ್ಯತ್ಯಯವಾದ ಕಾರಣ ಆಗಸ್ಟ್ 9 ರಿಂದ ದೆಹಲಿಯ ಏಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಗಿತ್ತು. ರಾಷ್ಟ್ರಪತಿಯವರೊಂದಿಗೆ ಕೇಂದ್ರ ಆರೋಗ್ಯ ಸಚಿವ ಹರ್ಷ್ ವರ್ಧನ್ ಮತ್ತು ಆರೋಗ್ಯ ಇಲಾಖೆ ರಾಜ್ಯ ಸಚಿವೆ ಅಶ್ವಿನಿ ಚೌಬೆ ಆಗಮಿಸಿ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಬಗ್ಗೆ ವಿಚಾರಿಸಿದ್ದಾರೆ.
ಅರುಣ್ ಜೇಟ್ಲಿ ಅವರ ಆರೋಗ್ಯವನ್ನು ತಜ್ಞರ ತಂಡವೊಂದು ಮೇಲ್ವಿಚಾರಣೆ ನಡೆಸುತ್ತಿದ್ದು, ಇದು ಅವರನ್ನು ಹೃದಯರಕ್ತನಾಳದ ವಿಭಾಗಕ್ಕೆ ದಾಖಲಿಸಲಾಗಿದೆ ಈ ವೇಳೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿತ್ತು ಎಂದು ಏಮ್ಸ್ ವೈದ್ಯರು ಹೇಳಿದ್ದಾರೆ.
ವೃತ್ತಿಯಲ್ಲಿ ವಕೀಲರಾದ ಜೇಟ್ಲಿ, ಬಿಜೆಪಿ ಸರ್ಕಾರದ ಮೊದಲ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಪ್ರಮುಖ ಪಾತ್ರ ವಹಿಸಿದ್ದರು