ನವದೆಹಲಿ,ಆ.17(Daijiworld News/RD): ಕೇಂದ್ರ ಸರ್ಕಾರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿಯವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಅವರನ್ನು ನಿನ್ನೆ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೊದಲಾದ ಬಿಜೆಪಿ ನಾಯಕರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ.
ಮಾಜಿ ಹಿರಿಯ ಬಿಜಿಪಿ ನಾಯಕರಾಗಿರುವ ಅರುಣ್ ಜೇಟ್ಲಿ, ಕೃತಕ ಉಸಿರಾಟದ ಮುಲಕ ಚಿಕಿತ್ಸೆ ಪಡೆಯುತ್ತಿದ್ದ್ಉ, ಇದೀಗ ಆರೋಗ್ಯದಲ್ಲಿ ಏರುಪೇರು ಕಂಡಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಸಿಬ್ಬಂದಿಗಳು ತಿಳಿಸಿದ್ದಾರೆ. ವಿಶೇಷ ವೈದ್ಯರ ತಂಡ ಈಗಾಗಲೇ ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿದೆ. ಸದ್ಯ ಅವರು ತೀವ್ರ ನಿಗಾ ಘಟಕದಲ್ಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ, ಹಲವಾರು ಮುಖಂಡರು ಅರುಣ್ ಜೇಟ್ಲಿಯವರ ಆರೋಗ್ಯದ ಬಗ್ಗೆ ವಿಚಾರಿಸಿಕೊಳ್ಳುತ್ತಿದ್ದು, ಇಂದು ಆಸ್ಪತ್ರೆಗೆ ಭೇಟಿ ಕೊಡಲಿದ್ದಾರೆ.