ಬೆಂಗಳೂರು, ಆ 17 (DaijiworldNews/SM): ರಾಜ್ಯದಲ್ಲಿ ಬಡವರಿಗೆ ವರದಾನವಾಗಿರುವ ಅನ್ನಭಾಗ್ಯ ಯೋಜನೆಯ ಅಕ್ಕಿಗೆ ಕಡಿವಾಣ ಹಾಕಲಾಗುತ್ತದೆ ಎಂಬ ವಿಚಾರಕ್ಕೆ ಸ್ಪಷ್ಟನೆ ನೀಡಿರುವ ಸಿಎಂ ಬಿಎಸ್ ವೈ, ಅನ್ನಭಾಗ್ಯ ಯೋಜನೆಯನ್ನು ರದ್ದು ಪಡಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿದ್ದ ಅಕ್ಕಿ ಪ್ರಮಾಣವನ್ನು ಕಡಿತ ಮಾಡುವುದಾಗಲಿ, ರದ್ದು ಪಡುಸುವುದಾಗಲಿ ಯಾವುದೇ ಯೋಜನೆ ನಮ್ಮ ಸರ್ಕಾರದ ಮುಂದಿಲ್ಲ ಎಂಬುವುದಾಗಿ ಸ್ಪಷ್ಟನೆ ನೀಡಿದ್ದಾರೆ. ಅನ್ನಭಾಗ್ಯ ಯೋಜನೆ ಮುಂದುವರಿಯಲು ನಾನು ಈಗಾಗಲೇ ಸಹಿ ಹಾಕಿದ್ದು, ಸೂಚನೆ ನೀಡಿದ್ದೇನೆ ಎಂದಿದ್ದಾರೆ.
ಇದಕ್ಕೂ ಮುನ್ನ ಸುದ್ದಿಗೋಷ್ಠಿ ನಡೆಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಯ ಏಳು ಕೆ.ಜಿ. ಅಕ್ಕಿಯಲ್ಲಿ ಕಡಿತ ಮಾಡಿದರೆ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಇದರ ವಿರುದ್ಧ ತೀವ್ರವಾದ ಹೋರಾಟ ನಡೆಸುತ್ತೇವೆ. ಸದನದಲ್ಲೂ ಇದರ ವಿರುದ್ಧ ಪ್ರತಿಭಟನೆ ನಡೆಸುತ್ತೇವೆ. ಮಾತ್ರವಲ್ಲದೆ ಬೀದಿಗಿಳಿದು ಹೋರಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದರು.