ಬೆಂಗಳೂರು,ಆ 18 (Daijiworld News/RD): ರಾಜ್ಯ ರಾಜಕೀಯದಲ್ಲಿ ತಲ್ಲಣ ಮೂಡಿಸಿದ ಫೋನ್ ಟ್ಯಾಪಿಂಗ್ ವಿಚಾರ, ಇದೀಗ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಸರ್ಕಾರ, ಸಿಬಿಐ ತನಿಖೆಯ ಜೊತೆಗೆ ಸಿಐಡಿ ತನಿಖೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಆದೇಶ ನೀಡಿದ್ದಾರೆ.
ಕಮಿಷನರ್ ಭಾಸ್ಕರ್ ರಾವ್ ಅವರ ಆಡಿಯೋ ಲೀಕ್ ಆಗಿದ್ದು, ಡಿಜಿಪಿ ದರ್ಜೆ ಅಧಿಕಾರಿ ಸಿಐಡಿ ಚರಣ್ ರೆಡ್ಡಿ ನೇತೃತ್ವದಲ್ಲಿ ಸಿಐಡಿ ತನಿಖೆ ಮಾಡಲಿದೆ. ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿ ಇದರ ಸತ್ಯಾಸತ್ಯತೆಯನ್ನು ತಿಳಿಯುವ ಉದ್ದೇಶದಿಂದ ಈ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶ ನೀಡಿ ಬಳಿಕ ಎರಡನೇ ಆವೃತ್ತಿಯಲ್ಲಿ ಸಿಬಿಐ ತನಿಖೆ ನಡೆಯಲಿದೆ. ಈ ವಿಚಾರದ ಬಗ್ಗೆ ಸಿದ್ದರಾಮಯ್ಯನವರೇ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದು, ಆದರೆ ಡಿಕೆ ಶಿವಕುಮಾರ್ ಅವರು ಫೋನ್ ಕದ್ದಾಲಿಕೆ ನಡೆದಿಲ್ಲ ಎಂದು ಹೇಳಿದ್ದರು.
ಮೈತ್ರಿ ಸರ್ಕಾರ ಉಳಿಸಿಕೊಳ್ಳುವ ಬರದಲ್ಲಿ ಕುಮಾರಸ್ವಾಮಿ ಪೊಲೀಸ್ ಅಧಿಕಾರಿಗಳನ್ನು ತಮ್ಮ ನಿಯಂತ್ರಣಕ್ಕೆ ತಂದು ಅವರ ಮೂಲಕ ಶಾಸಕರ ಫೋನ್ ಟ್ಯಾಪಿಂಗ್ ಮಾಡುತ್ತಿದ್ದರು, ಜೊತೆಗೆ ಸಿದ್ದರಾಮಯ್ಯನವರ ಕರೆಯನ್ನು ಟ್ಯಾಪ್ ಮಾಡಲಾಗಿದೆ. ಹೀಗಾಗಿ ಮೈತ್ರಿ ಸರ್ಕಾರದ ಶಾಸಕರು ಫೋನ್ ಟ್ಯಾಪಿಂಗ್ ಮಾಡಿದ್ದಾರೆ ಎಂದು ಆರ್. ಅಶೋಕ್ ಆರೋಪ ಹೊರಿಸಿದ್ದಾರೆ.