ನವದೆಹಲಿ, ಆ 18 (DaijiworldNews/SM): ಕೇಂದ್ರದ ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಹದಗೆಟ್ಟಿದ್ದು, ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಈಗಾಗಲೇ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಅರುಣ್ ಜೇಟ್ಲಿ ಅವರ ಆರೋಗ್ಯ ವಿಚಾರಿಸಿದ್ದಾರೆ. ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ಭೇಟಿ ನೀಡುವ ಸಾಧ್ಯತೆ ಇದೆ.
ಕಳೆದ ಒಂದು ವಾರದಿಂದ ಜೇಟ್ಲಿಯವರ ಆರೋಗ್ಯ ಹದಗೆಟ್ಟಿತು. ಈ ಹಿನ್ನೆಲೆಯಲ್ಲಿ ಆಗಸ್ಟ್ 9 ರಂದು ಅವರನ್ನು ತೀವ್ರವಾಗಿ ನಿತ್ರಾಣಗೊಂಡು ಬಳಲುತ್ತಿದ್ದ ಅರುಣ್ ಜೇಟ್ಲಿ ಅವರನ್ನು ಏಮ್ಸ್ ಗೆ ದಾಖಲಿಸಲಾಗಿದೆ. ಇದೀಗ ಅವರ ಆರೋಗ್ಯ ಮತ್ತಷ್ಟು ಚಿಂತಾಜನಕವಾಗಿದೆ.
66 ವರ್ಷ ವಯಸ್ಸಿನ ಜೇಟ್ಲಿ ಅವರು ಸದ್ಯ ಜೀವ ರಕ್ಷಕ ಸಾಧನದ ಮೂಲಕ ಉಸಿರಾಟ ನಡೆಸುತ್ತಿದ್ದಾರೆ. ತೀವ್ರ ನಿಗಾ ಘಟಕದಲ್ಲಿರುವ ಅರುಣ್ ಜೇಟ್ಲಿ ಅವರಿಗೆ ಎಂಡೋಕ್ರಿನೋಲಾಜಿಸ್ಟ್, ನೆಪ್ರೋಲಾಜಿಸ್ಟ್ ಮತ್ತು ಕಾರ್ಡಿಯಾಲಜಿಸ್ಟ್ ಗಳ ತಂಡದ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ.