ನವದೆಹಲಿ, ಆ.20(Daijiworld News/SS): ಪಾಕಿಸ್ತಾನ ಸೇನೆಯು ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಸೇನಾಪಡೆ ಪೋಸ್ಟ್'ಗಳು ಹಾಗೂ ಹಳ್ಳಿಗಳನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಪಾಕ್ ಸೇನೆ ಮತ್ತೆ ತನ್ನ ಪುಂಡಾಟ ಮುಂದುವರಿಸಿದೆ. ಕೃಷ್ಣ ಘಾಟಿ ಸೆಕ್ಟರ್ನಲ್ಲಿ ಗಡಿಯುದ್ದಕ್ಕೂ ಗುಂಡಿನ ದಾಳಿ ನಡೆದಿದ್ದು ಸುಮಾರು 11 ಗಂಟೆಗೆ ಈ ದಾಳಿ ಪ್ರಾರಂಭವಾಗಿದೆ. ಇದಕ್ಕೆ ಪ್ರತಿರೋಧವಾಗಿ ಭಾರತೀಯ ಸೇನೆ ಸಹ ಗುಂಡು ಹಾರಿಸಿ ಪಾಕ್ ಸೈನಿಕರ ವಿರುದ್ಧ ಹೋರಾಡುತ್ತಿರುವುದಾಗಿ ಸೇನಾ ವಕ್ತಾರರು ತಿಳಿಸಿದ್ದಾರೆ.
ಉಭಯ ರಾಷ್ಟ್ರಗಳ ನಡುವೆ ಗಡಿಯಾಚೆ ಗುಂಡಿನ ದಾಳಿ ನಡೆಯುತ್ತಿದೆ. ಪಾಕಿಸ್ತಾನದ ಗುಂಡಿನ ದಾಳಿಯಿಂದ ಯಾವುದೇ ಜೀವಹಾನಿಯಾಗಿಲ್ಲ ಎಂದು ತಿಳಿಸಿದ್ದಾರೆ.
ಕೆಲ ದಿನಗಳ ಹಿಂದೆ ಪೂಂಚ್ ಜಿಲ್ಲೆ ಸಮೀಪದ ರಾಜೌರಿ ಜಿಲ್ಲೆಯ ನೌಶೇರಾ ಸೆಕ್ಟರ್ನಲ್ಲಿ ಪಾಕಿಸ್ತಾನ ಸೇನೆಯು ಗುಂಡಿನ ದಾಳಿ ನಡೆದಿದ್ದು ಆ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದರು. ಇದೀಗ ಪಾಕ್ ಸೇನೆ ಮತ್ತೆ ತನ್ನ ಪುಂಡಾಟ ಮುಂದುವರಿಸಿದೆ.