ನವದೆಹಲಿ, ಏ. 18 (DaijiworldNews/AK):ಕುಟುಂಬ ರಾಜಕಾರಣ ಮಾಡುವ ಪಕ್ಷಗಳು ಮಹಿಳೆಯರ ಸಬಲೀಕರಣವಾದರೆ ತಮ್ಮ ಆಂತರಿಕ ಅಧಿಕಾರ ಅಧಿಕಾರಕ್ಕೆ ಧಕ್ಕೆಯಾಗಬಹುದು ಎಂಬ ಭಯದಿಂದ ಮಹಿಳಾ ಮೀಸಲಾತಿಯನ್ನು ವಿರೋಧಿಸುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆಸೋಲಾಗಿದಕ್ಕೆ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಕಾಂಗ್ರೆಸ್, ಡಿಎಂಕೆ, ಟಿಎಂಸಿ, ಎಸ್ಪಿ ಮತ್ತು ಇತರ ಪಕ್ಷಗಳ ವಿರುದ್ಧ ಆಕ್ರೋಶ ಹೊರಹಾಕಿದರು.
ಸಂಸತ್ತಿನಲ್ಲಿ ಮಸೂದೆ ಬಿದ್ದಾಗ ಕಾಂಗ್ರೆಸ್ ಸಂಭ್ರಮಿಸಿದ್ದನ್ನು ಉಲ್ಲೇಖಿಸಿದ ಮೋದಿ, ದೇಶದ ಹೆಣ್ಣುಮಕ್ಕಳು ಅಳುತ್ತಿದ್ದರೆ ಕಾಂಗ್ರೆಸ್ ಮತ್ತು ಅದರ ಮಿತ್ರಪಕ್ಷಗಳು ಹಬ್ಬ ಮಾಡುತ್ತಿವೆ ಎಂದು ಭಾವನಾತ್ಮಕವಾಗಿ ವಾಗ್ದಾಳಿ ನಡೆಸಿದರು.
ದೇಶದ ಪ್ರಜೆಗಳು ಈಗ ‘ಕುಟುಂಬ ರಾಜಕಾರಣ’ ಮತ್ತು ‘ಅಭಿವೃದ್ಧಿ’ ನಡುವೆ ಯಾವುದನ್ನಾದರೂ ಒಂದನ್ನು ಆರಿಸಿಕೊಳ್ಳಬೇಕಾದ ಸಮಯ ಬಂದಿದೆ. 21ನೇ ಶತಮಾನದ ಮಹಿಳೆಯರು ಈ ರಾಜಕೀಯ ಪಕ್ಷಗಳ ನಡವಳಿಕೆಯನ್ನು ಗಮನಿಸುತ್ತಿದ್ದು, ಮುಂದಿನ ದಿನಗಳಲ್ಲಿ ಇವರಿಗೆ ತಕ್ಕ ಶಿಕ್ಷೆ ನೀಡಲಿದ್ದಾರೆ ಎಂದು ಅವರು ಎಚ್ಚರಿಸಿದರು.