ಬೆಂಗಳೂರು, ಏ. 22 (DaijiworldNews/AA): ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದಾರೆ.

ಏಪ್ರಿಲ್ 23ರ ಮಧ್ಯಾಹ್ನ 12 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ. ಸುದ್ದಿಗೋಷ್ಠಿಯ ಬಳಿಕ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಅವರು ತಿಳಿಸಿದರು.
ಕೋರ್ಟ್ ಆದೇಶದಂತೆ ಈ ಬಾರಿ ಹಿಂದಿ ಭಾಷೆಯ ಪರೀಕ್ಷೆಗೆ ಅಂಕ ನೀಡಲಾಗಿದೆ. ಮುಂದಿನ ವರ್ಷದಿಂದ ಗ್ರೇಡ್ ವ್ಯವಸ್ಥೆ ನಿಯಮ ಜಾರಿಗೆ ತೀರ್ಮಾನ ಮಾಡಲಾಗಿದೆ. ಹಿಂದಿಗೆ ಅಂಕ ನೀಡುವ ಬಗ್ಗೆ ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತರಲಾಗಿದೆ ಎಂದರು.