ಕೋಲ್ಕತ್ತಾ, ಏ. 22 (DaijiworldNews/AA): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಗುರುವಾರ(ಏ.23) ಮತದಾನ ನಡೆಯಲಿದೆ.

ನಾಳೆ ಉತ್ತರ ಬಂಗಾಳದ ಮುರ್ಶಿದಾಬಾದ್, ಜರ್ಗಾಮ್, ಮೇದಿನಿಪುರೆ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್ಬುಮ್ ಸೇರಿದಂತೆ 16 ಜಿಲ್ಲೆಗಳ 152 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಈ 152 ಕ್ಷೇತ್ರಗಳಲ್ಲಿ 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
ಚುನಾವಣೆಗೆ ಹೆಚ್ಚುವರಿ 4,660 ಸಹಾಯಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು ಮತಗಟ್ಟೆಗಳ ಪೈಕಿ 8,000ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ.
ರಾಜ್ಯದಾದ್ಯಂತ 780ಕ್ಕೂ ಹೆಚ್ಚು ಕೇಂದ್ರ ಭದ್ರತಾ ಪಡೆಗಳ ಕಂಪನಿಗಳು ನಿಯೋಜಿಸಲಾಗಿದೆ. ನಾಳೆ ನಡೆಯುವ ಮತದಾನಕ್ಕೂ ಮುನ್ನ ಈಗಾಗಲೇ 199ಕ್ಕೂ ಹೆಚ್ಚು ಗೂಂಡಾಗಳನ್ನು ಬಂಧಿಸಲಾಗಿದೆ.