ಬೆಂಗಳೂರು,ಏ. 23 (DaijiworldNews/AK): 2025-26ನೇ ಸಾಲಿನ SSLC ಫಲಿತಾಂಶವನ್ನು ಪ್ರಕಟಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ ದ್ವಿತೀಯ ಹಾಗೂ ಉತ್ತರ ಕನ್ನಡ ಜಿಲ್ಲೆ ತೃತೀಯ ಸ್ಥಾನದಲ್ಲಿವೆ.

ಈ ಬಾರಿಯ ಫಲಿತಾಂಶವು ದಾಖಲೆ ಮಟ್ಟದ ಪ್ರಗತಿ ಕಂಡಿರುವುದರಿಂದ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮೂರನೇ ಬಾರಿಯ ಪರೀಕ್ಷೆ ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.
ಎರಡನೇ ಪರೀಕ್ಷೆಯು ಮೇ 18 ರಿಂದ ಮೇ 25ರವರೆಗೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಪಾಸ್ ಆಗಲು ಪ್ರಯತ್ನಿಸಬಹುದು. ಇದಕ್ಕಾಗಿ ಶಿಕ್ಷಕರು ಮತ್ತು ಇಲಾಖೆಯು ಸೂಕ್ತ ತರಬೇತಿ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.