ನವದೆಹಲಿ, ಏ. 23 (DaijiworldNews/AA): ತಮಿಳುನಾಡು ಮತ್ತು ಪಶ್ಚಿಮ ಬಂಗಾಳದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ ಸಂಜೆ 5 ಗಂಟೆಯವರೆಗಿನ ಅಂಕಿಅಂಶಗಳ ಪ್ರಕಾರ, ತಮಿಳುನಾಡಿನಲ್ಲಿ ಸುಮಾರು 82.24%, ಪಶ್ಚಿಮ ಬಂಗಾಳದಲ್ಲಿ 89.93% ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಪಶ್ಚಿಮ ಬಂಗಾಳದ ಮೊದಲ ಹಂತದ ಚುನಾವಣೆಯಲ್ಲಿ ಮತದಾನದ ಪ್ರಮಾಣ ಇನ್ನೂ ಹೆಚ್ಚಿದ್ದು, ಸುಮಾರು 89.93% ಮತದಾನ ದಾಖಲಾಗಿದೆ. ಪಶ್ಚಿಮ ಬಂಗಾಳದ ರಘುನಾಥ್ ಗಂಜ್ 95.64%, ಸಂಸೇರ್ ಗಂಜ್ 95.34% ಅತಿ ಹೆಚ್ಚಿನ ಮತದಾನವಾಗಿದೆ. ಇನ್ನು ತಮಿಳುನಾಡಿನ ವೀರಪಾಂಡಿಯಲ್ಲಿ 90.76% ಮತದಾನ ನಡೆದಿದೆ.
ತಮಿಳುನಾಡಿನಲ್ಲಿ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಕ್ಷೇತ್ರಗಳಿಗೆ ಮತದಾನ ನಡೆದಿದೆ. ಉಳಿದ 142 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಏಪ್ರಿಲ್ 29ರಂದು ಚುನಾವಣೆ ನಡೆಯಲಿದೆ.