ನವದೆಹಲಿ,ಆ.21(Daijiworld News/RD): ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಮತ್ತು ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣದಲ್ಲಿ ಪಿ. ಚಿದಂಬರಂ ಅವರ ಜಾಮೀನು ಅರ್ಜಿಯನ್ನು ದೆಹಲಿಯ ಹೈಕೋರ್ಟ್ ತಿರಸ್ಕೃತಗೊಳಿಸಿದೆ. ಹೀಗಾಗಿ ಸಿಬಿಐ ಅಧಿಕಾರಿಗಳು ಅವರನ್ನು ಬಂಧಿಸಲು ಮನೆಗೆ ತೆರಳಿದಾಗ, ಪಿ.ಚಿದಂಬರಂ ನಾಪತ್ತೆಯಾಗಿದ್ದಾರೆ.
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಮತ್ತು ಏರ್ಸೆಲ್ ಮ್ಯಾಕ್ಸಿಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ಹೈಕೋರ್ಟ್ ಪಿ ಚಿದಂಬರಂ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ, ಹೀಗಾಗಿ ಅವರ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ಹೀಗಾಗಿ ಅವರನ್ನು ಬಂಧಿಸಲು ಸಿಬಿಐ ಅಧಿಕಾರಿಗಳು ಅವರ ಮನೆಗೆ ತೆರಳಿದಾಗ ಅಲ್ಲಿ ಇರಲಿಲ್ಲ. ಅವರು ಮನೆಯಲ್ಲಿ ಇಲ್ಲದ ಕಾರಣ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಿ ಎಂದು ಸಿಬಿಐ ಅಧಿಕಾರಿಗಳು ಬಾಗಿಲಿಗೆ ನೋಟಿಸ್ ಅಂಟಿಸಿ, 10 ನಿಮಿಷಗಳ ನಂತರ ಅಲ್ಲಿಂದ ವಾಪಸ್ ತೆರಳಿದ್ದಾರೆ.
ನೋಟಿಸಿನಲ್ಲಿ 2 ಗಂಟೆಯ ಒಳಗಡೆ ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದನ್ನು ಪ್ರಶ್ನೆ ಮಾಡಿರುವ ಚಿದಂಬರಂ ಪರ ವಕೀಲ ಅರ್ಶದೀಪ್ ಸಿಂಗ್ ಖುರಾನ, ನನ್ನ ಕಕ್ಷಿದಾರರು 2 ಗಂಟೆಯ ಒಳಗಡೆ ವಿಚಾರಣೆ ಹಾಜರಾಗಬೇಕೆಂದು ನೋಟಿಸಿನಲ್ಲಿ ಉಲ್ಲೇಖಿಸಿದ್ದೀರಿ. ಆದರೆ ರೀತಿಯಾಗಿ ಹಾಜರಾಗಬೇಕೆಂಬುವುದು ಕಾನೂನಿನ ಯಾವ ನಿಬಂಧನೆ ಅಡಿ ಇದೆ ಎಂದು ಪ್ರಶ್ನೆ ಮಾಡಿದ್ದಾರೆ. ಹೀಗಾಗಿ ಈ ಅರ್ಜಿ ವಿಚಾರಣೆ ನಡೆಯುವರೆಗೂ ನನ್ನ ಕಕ್ಷಿದಾರರ ಮೇಲೆ ಯಾವುದೇ ಕ್ರಮ ತೆಗೆದುಕೊಳ್ಳಬೇಡಿ ಎಂದು ವಕೀಲರು ಮನವಿ ಮಾಡಿದ್ದಾರೆ.
ದೆಹಲಿ ಹೈಕೋರ್ಟ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸುತ್ತಿದ್ದಂತೆಯೇ ಚಿದಂಬರಂ ಬಂಧನದಿಂದ ಮುಕ್ತಿ ದೊರೆಯಲು ರಕ್ಷಣೆ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.