ನವದೆಹಲಿ,ಏ. 30 (DaijiworldNews/AK): ಕಾಂಗ್ರೆಸ್ ನಾಯಕ ಪವನ್ ಖೇರಾ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ.

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ದೂರಿನ ಮೇರೆಗೆ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಜೆ.ಕೆ. ಮಹೇಶ್ವರಿ ಮತ್ತು ನ್ಯಾಯಮೂರ್ತಿ ಅತುಲ್ ಚಂದೂರ್ಕರ್ ಅವರ ಪೀಠವು ಈ ವಿಚಾರಣೆ ನಡೆಸಿತು.
ಖೇರಾ ಪರ ಹಾಜರಾದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ಈ ಪ್ರಕರಣವು ಕೇವಲ ಮಾನನಷ್ಟಕ್ಕೆ ಸಂಬಂಧಿಸಿದ್ದು, ಕಸ್ಟಡಿ ವಿಚಾರಣೆಯ ಅಗತ್ಯವಿಲ್ಲ ಎಂದು ವಾದಿಸಿದರು. ಕಸ್ಟಡಿ ವಿಚಾರಣೆಯ ಮೂಲಕ ಅವಮಾನಿಸುವ ಅಗತ್ಯ ಏನಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಅಲ್ಲದೆ, ಅಸ್ಸಾಂ ಸಿಎಂ ಅವರು ಖೇರಾ ಅವರಿಗೆ ಜೈಲು ಶಿಕ್ಷೆಯ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಿದ ಸಿಂಘ್ವಿ, ಖೇರಾ ತನಿಖೆಗೆ ಸಹಕರಿಸಲು ಸಿದ್ಧರಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದರು.