ನವದೆಹಲಿ, ಮೇ. 04 (DaijiworldNews/AA): ಕೇರಳ, ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಪುದುಚೇರಿ ವಿಧಾನಸಭಾ ಚುನಾವಣೆಗಳ ಹಾಗೂ ಕರ್ನಾಟಕದ ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗುತ್ತಿದೆ. ಬೆಳಗ್ಗೆ 8 ಗಂಟೆಯಿಂದಲೇ ಮತ ಎಣಿಕೆ ಪ್ರಾರಂಭವಾಗಿದೆ.

ತಮಿಳುನಾಡಿನಲ್ಲಿ ಒಟ್ಟು 234 ವಿಧಾನಸಭಾ ಸ್ಥಾನಗಳಿದ್ದು, ಅವುಗಳಲ್ಲಿ 62 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಪಶ್ಚಿಮ ಬಂಗಾಳದಲ್ಲಿ 294 ವಿಧಾನಸಭಾ ಸ್ಥಾನಗಳಿದ್ದು, 77 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಕೇರಳದಲ್ಲಿ ಒಟ್ಟು 140 ವಿಧಾನಸಭಾ ಸ್ಥಾನಗಳಿದ್ದು, 140 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಅಸ್ಸಾಂನಲ್ಲಿ 126 ವಿಧಾನಸಭಾ ಸ್ಥಾನಗಳಿದ್ದು, 40 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ. ಪುದುಚೇರಿಯಲ್ಲಿ 30 ವಿಧಾನಸಭಾ ಸ್ಥಾನಗಳಿದ್ದು, ಅವುಗಳಲ್ಲಿ 6 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯುತ್ತಿದೆ.
ಕರ್ನಾಟಕದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಲ್ಲಿ ನಡೆದ ಉಪಚುನಾವಣೆಯಲ್ಲಿಯೂ ಮತ ಎಣಿಕೆ ನಡೆಯುತ್ತಿದ್ದು, ಇದೀಗ ಕಾಂಗ್ರೆಸ್ ಆರಂಭಿಕ ಮುನ್ನಡೆ ಸಾಧಿಸಿದೆ. ತಮಿಳುನಾಡಿನಲ್ಲಿ ಡಿಎಂಕೆ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ, ಕೇರಳದಲ್ಲಿ ಯುಡಿಇಎಫ್, ಅಸ್ಸಾಂನಲ್ಲಿ ಬಿಜೆಪಿ ಹಾಗೂ ಪುದುಚೇರಿಯಲ್ಲಿ ಬಿಜೆಪಿ ಪಕ್ಷ ಮುನ್ನಡೆ ಸಾಧಿಸಿದೆ.