ಬೆಂಗಳೂರು, ಆ.22(Daijiworld News/SS): ಅತಿವೃಷ್ಟಿ ಭಾದಿತ ಜನರಿಗೆ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಈಗಾಗಲೇ ಸಚಿವರು ಪ್ರವಾಸ ಮಾಡುತ್ತಿದ್ದು, ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ. ಅತಿವೃಷ್ಟಿ ಭಾದಿತ ಜನರಿಗೆ ಸರಕಾರ ಎಲ್ಲ ರೀತಿಯ ನೆರವು ನೀಡಲಿದೆ. ಸಂತ್ರಸ್ತರಿಗೆ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ನೆರೆ ಪೀಡಿತ ಪ್ರದೇಶಗಳ ಜನರಿಗೆ ರಾಜ್ಯ ಸರಕಾರ ಎಲ್ಲ ರೀತಿಯ ನೆರವು ನೀಡುತ್ತಿದ್ದು, ಶೀಘ್ರದಲ್ಲಿಯೇ ಕೇಂದ್ರ ಸರಕಾರ ಕೂಡಾ ನೆರವಿಗೆ ಧಾವಿಸಲಿದೆ ಎಂದು ತಿಳಿಸಿದರು.
ಈ ವಿಚಾರವಾಗಿ ಕೇಂದ್ರ ಸರ್ಕಾರದ ಜೊತೆ ಮಾತನಾಡಲು ನಾನು ಇಂದು ಸಂಜೆ ದಿಲ್ಲಿಗೆ ತೆರಳುತ್ತಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ನಾಳೆ (ಆ.23) ರಾಜ್ಯಕ್ಕೆ ವಾಪಸಾಗುತ್ತೇನೆ ಎಂದು ತಿಳಿಸಿದರು.